/newsfirstlive-kannada/media/media_files/2025/11/22/cm-siddaramaiah-and-rahul-gandhi02-2025-11-22-18-23-26.jpg)
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಧೀಡೀರನೇ ಕಾಂಗ್ರೆಸ್ ವರಿಷ್ಠ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿದ್ದಾರೆ. ತಮ್ಮ ತವರು ಜಿಲ್ಲೆ ಮೈಸೂರಿನಲ್ಲೇ ರಾಹುಲ್ ಗಾಂಧಿ ಭೇಟಿಯಾಗುತ್ತಿರುವುದು ವಿಶೇಷ.
ನಾಳೆ ಮೈಸೂರಿಗೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ತಮಿಳುನಾಡಿನ ಗುಡಲೂರಿಗೆ ತೆರಳಲು ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸುವರು. ಮೈಸೂರಿನಿಂದ ತಮಿಳುನಾಡಿಗೆ ರಾಹುಲ್ ಗಾಂಧಿ ತೆರಳುವರು. ದೆಹಲಿಯಿಂದ ಮೈಸೂರಿಗೆ ಬಂದು ತಮಿಳುನಾಡಿನ ಗುಡಲೂರಿಗೆ ರಾಹುಲ್ ಗಾಂಧಿ ತೆರಳುವರು. ಈ ಹಿನ್ನಲೆಯಲ್ಲಿ ನಾಳೆ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವರು. ಸಂಕ್ರಾಂತಿಗೆ 2 ದಿನ ಮೊದಲು ಸಿಎಂ ಸಿದ್ದರಾಮಯ್ಯ ನೇರವಾಗಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭೇಟಿ ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us