/newsfirstlive-kannada/media/media_files/2025/10/28/siddaramaiah-5-2025-10-28-21-39-11.jpg)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇವತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಚ್ಎಎಲ್​ನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಂತರ ನಾರಾಯಣಗುರು-ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಳಿಕ ಪೇಸ್ ಮತ್ತು Al ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಪೇಸ್ ಟೈಡ್ ಪಾರ್ಕ್ ಮತ್ತು ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಸರ್ಕಿಟ್ ಹೌಸ್​ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್ ಪ್ರತಿನಿಧಿಗಳನ್ನ ಭೇಟಿ ಮಾಡಲಿದ್ದಾರೆ. ಬಳಿಕ ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಭಾಗಿಯಾಗಲಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರದ ಗೊಂದಲ ಜೋರಾಗಿದೆ. ಈ ಮಧ್ಯೆ ಸಿಎಂ ಮತ್ತು ಡಿಸಿಎಂ ನಡುವೆ ಬ್ರೇಕ್​ಫಾಸ್ಟ್ ಮೀಟಿಂಗ್​ಗಳು ನಡೆದಿವೆ. ಹೀಗಾಗಿ ಕೆಸಿ ವೇಣುಗೋಪಾಲ್ ಭೇಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ಇದನ್ನೂ ಓದಿ: ರಾಜಕೀಯ ನಮ್ಮಪ್ಪನ ಆಸ್ತಿಯಲ್ಲ, ಶಾಶ್ವತವೂ ಅಲ್ಲ -ಅಂತರಾಳ ಹೊರ ಹಾಕಿದ ಸಿಎಂ VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us