/newsfirstlive-kannada/media/media_files/2025/12/17/cm-siddaramaiah-2025-12-17-18-42-16.jpg)
ಹೊಟ್ಟೆನೋವಿನಿಂದ ವಿಶ್ರಾಂತಿ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನಲೆಯಲ್ಲಿ ಇಂದು ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ, ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೊಟ್ಟೆನೋವು ಹಿನ್ನಲೆಯಲ್ಲಿ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆಯವರೆಗೂ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿಲ್ಲ. ಆದರೇ, ಸರ್ಕ್ಯೂಟ್ ಹೌಸ್ ನಲ್ಲೇ ಶಾಸಕರುಗಳು ಬಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವುದನ್ನು ಮುಂದುವರಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ , ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ, ಸಚಿವ ಭೈರತಿ ಸುರೇಶ್ ಹಾಗೂ ಪುತ್ರ ಯತೀಂದ್ರ, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಳಿಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಆರೋಗ್ಯ ವಿಚಾರಣೆಗೆ ಬಂದಿದ್ದೇನೆ ಅಷ್ಟೇ. ರಾಜಕೀಯ, ಅಭಿವೃದ್ಧಿ ಸೇರಿ ಯಾವುದೇ ಚರ್ಚೆ ಆಗಿಲ್ಲ. ಅವರಿಗೆ ಏನ್ ದೈರ್ಯ ಹೇಳುವುದು . ನಮಗೆ ಧೈರ್ಯ ಹೇಳುವ ಹಾಗೇ ಇದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸಿದ್ದರಾಮಯ್ಯ ಆರೋಗ್ಯ ಚೆನ್ನಾಗಿದೆ. ಅವರ ಜೊತೆಗೆ ಊಟ ಮಾಡಿಕೊಂಡು ಬಂದಿರುವೆ . ನಾಳೆ ಸದನದಲ್ಲಿ ಸಿಎಂ ಉತ್ತರ ಕೊಡಬೇಕಿದೆ. ಹಾಗಾಗಿ ಮಾಹಿತಿ ನೋಡಿಕೊಳ್ಳುತ್ತಿದ್ದಾರೆ ಎಂದು ನಗರಾಭಿವೃದ್ದಿ ಖಾತೆ ಸಚಿವ ಭೈರತಿ ಸುರೇಶ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us