/newsfirstlive-kannada/media/media_files/2025/10/22/yathindra-siddaramaiah-1-2025-10-22-16-48-49.jpg)
ಯತೀಂದ್ರ ಮತ್ತು ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ, ಹೀಗಾಂತ ಹೇಳಿದ್ದು ಯಾರೋ ಬಿಜೆಪಿ ನಾಯಕರಲ್ಲ. ಖುದ್ದು ಸಿಎಂ ಸಿದ್ದರಾಮಯ್ಯ ಅವರ ಸುಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೇ ಈ ಮಾತು ಹೇಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಕ್ಯಾಬಿನೆಟ್‌ನ ಸಚಿವ ಸತೀಶ್ ಜಾರಕಿಹೊಳಿಗೆ ಮಾರ್ಗದರ್ಶಕರಾಗಲಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಎತ್ತಿ ಹಿಡಿಯುತ್ತಾರೆ. ಪಕ್ಷವನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಾರೆ. ಇಂಥ ಸೈದ್ದಾಂತಿಕ ಬದ್ದತೆಯ ನಾಯಕನನ್ನು ಪಡೆಯುವುದು ಅಪರೂಪ. ಸತೀಶ್ ಜಾರಕಿಹೊಳಿ ಅವರು ತಮ್ಮ ಉತ್ತಮ ಕೆಲಸವನ್ನು ಮುಂದುವರಿಸಲಿ ಎಂದು ನಾನು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/10/22/yathindra-siddaramaiah-2025-10-22-16-20-08.jpg)
ವೈಚಾರಿಕವಾಗಿ ಪ್ರಗತಿಪರ ತತ್ವ ಸಿದ್ದಾಂತ ಇರುವ ನಾಯಕರು ಬೇಕು. ಸತೀಶ ಜಾರಕಿಹೊಳಿಯವರು ಈ ಜವಾಬ್ದಾರಿ ನಿಭಾಯಿಸುತ್ತಾರೆ . ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಯತೀಂದ್ರ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ ನಡೆದ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಯತೀಂದ್ರ ಭಾಗವಹಿಸಿ ಭಾಷಣ ಮಾಡಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿಗೆ ಸಿದ್ದರಾಮಯ್ಯ ಮಾರ್ಗದರ್ಶಕರಾಗಲಿದ್ದಾರೆ ಎಂದಿದ್ದಾರೆ.
ಪಕ್ಷವನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಾರೆ ಎಂದಿರುವುದು ಕೂಡ ಸಿದ್ದರಾಮಯ್ಯಗೆ ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಆಯ್ಕೆಯಾಗುತ್ತಾರಾ ಎಂಬ ಕುತೂಹಲ ಹುಟ್ಟು ಹಾಕಿದೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಗಾದಿಗೆ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ನಾಯಕರ ನಡುವೆ ಫೈಟಿಂಗ್ ನಡೆಯುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲ್ ಕೂಡ ಸಿಎಂ ರೇಸ್ ನಲ್ಲಿದ್ದಾರೆ. ಆದರೇ, ಸಿಎಂ ಸಿದ್ದರಾಮಯ್ಯ ಯಾರು ಅನ್ನು ಬೆಂಬಲಿಸುತ್ತಾರೆ ಎಂಬ ಕುತೂಹಲ ಇದೆ. ಈಗ ಯತೀಂದ್ರ ನೀಡಿರುವ ಹೇಳಿಕೆ ನೋಡಿದರೇ, ಸಿದ್ದರಾಮಯ್ಯಗೆ ತಮ್ಮ ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಆಯ್ಕೆ ಮಾಡುವ ಒಲವು ಇದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us