Advertisment

ಶೇ.63 ರಷ್ಟು ಭ್ರಷ್ಟಾಚಾರ ಬಿಜೆಪಿ ಕಾಲದ್ದು ಎಂದು ಸಿಎಂ ಸಿದ್ದು ಪ್ರತ್ಯುತ್ತರ : ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು

ಉಪಲೋಕಾಯುಕ್ತರ ಹೇಳಿಕೆಯ ಆಧಾರದ ಮೇಲೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಕರ್ನಾಟಕದಲ್ಲಿ ಈಗ ಶೇ.63 ರಷ್ಟು ಭ್ರಷ್ಟಾಚಾರ ಇದೆ ಎಂದು ಆರೋಪಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ. ಉಪಲೋಕಾಯುಕ್ತರು ಹೇಳಿದ್ದು 2019ರ ಟ್ರಾನ್ಸಪರೆನ್ಸಿ ಇಂಡಿಯಾ ಇಂಟರ್ ನ್ಯಾಷನಲ್ ವರದಿ ಬಗ್ಗೆ ಎಂದಿದ್ದಾರೆ.

author-image
Chandramohan
Corruption fight in karnataka

ಉಪಲೋಕಾಯುಕ್ತರ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ

Advertisment
  • ಉಪಲೋಕಾಯುಕ್ತರ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
  • ಉಪಲೋಕಾಯುಕ್ತ ಜಸ್ಟೀಸ್ ಬಿ.ವೀರಪ್ಪರಿಂದ 2019ರ ವರದಿ ಆಧಾರದ ಮೇಲೆ ಹೇಳಿಕೆ
  • 2019 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇತ್ತು ಎಂದು ಸಿಎಂ ಪ್ರತ್ಯುತ್ತರ


ಮೊನ್ನೆ ಕರ್ನಾಟಕದ ರಾಜ್ಯದ  ಉಪಲೋಕಾಯುಕ್ತ  ಜಸ್ಟೀಸ್ ಬಿ.ವೀರಪ್ಪ ಅವರು ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದಲ್ಲೇ ಐದನೇ ಸ್ಥಾನದಲ್ಲಿದೆ ಎಂದು ಬೆಂಗಳೂರು ವಕೀಲರ ಸಂಘದ ಸಭಾಂಗಣದಲ್ಲಿ ಹೇಳಿದ್ದರು.  ಇದು ರಾಜ್ಯದ ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40 ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂದು ಟೀಕಿಸಿ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೇ ಈಗ ಭ್ರಷ್ಟಾಚಾರ ಶೇ.63 ಕ್ಕೇರಿಕೆಯಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿ ಆರ್.ಅಶೋಕ್ ಆರೋಪಿಸಿದ್ದರು. 
ಆದರೇ, ಇದಕ್ಕೆ ಈಗ ಪ್ರತ್ಯುತ್ತರ ಹಾಗೂ ಸ್ಪಷ್ಟೀಕರಣವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.  ಮೊದಲನೇಯದಾಗಿ ಉಪ ಲೋಕಾಯುಕ್ತ ಜಸ್ಟೀಸ್ ಬಿ.ವೀರಪ್ಪ ಅವರು ಹೇಳಿದ್ದು ಟ್ರಾನ್ಸಪರೆನ್ಸಿ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆಯು 2019ರ ನವಂಬರ್ ನಲ್ಲಿ ನೀಡಿದ್ದ ವರದಿಯ ಬಗ್ಗೆ. ಆ ವರದಿಯಲ್ಲಿ ಕರ್ನಾಟಕದಲ್ಲಿ  ಶೇ.63 ರಷ್ಟು ಭ್ರಷ್ಟಾಚಾರ ಇದೆ ಎಂದು ಇತ್ತು. ಅದನ್ನು ಉಲ್ಲೇಖಿಸಿ ಉಪ ಲೋಕಾಯುಕ್ತ ಬಿ.ವೀರಪ್ಪ ಮಾತನಾಡಿದ್ದಾರೆ. 2019 ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವೇ ಇತ್ತು ಎಂದು ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ. 
ಇಂದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಸ್ತೃತವಾಗಿ ಟ್ವೀಟ್ ಮಾಡಿ ಆರ್‌.ಅಶೋಕ್ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್‌ನ ಪೂರ್ಣ ವಿವರ ಇಲ್ಲಿದೆ, ಓದಿ.

Advertisment

ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ. 

ಟ್ರಾನ್ಸ್‌ಪರೆಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ. 

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು. ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿ ಇತ್ತು. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ನೀರಾವರಿ ಇಲಾಖೆಯ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು ₹20,000 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಸ್ವತಃ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ಇಂದಿನ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದರು. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿ ಬಂದಿದ್ದಾರೆ. ಇವೆಲ್ಲಾ ಮರೆತು ಹೋಯಿತೇ? ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು. 

Advertisment

ಇಂದು "ನ ಖಾವೂಂಗಾ, ನ ಖಾನೆದೂಂಗ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ‌ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗೇಳುತ್ತಿದೆ. ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿ ಇರುವುದು ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ.

ಗೌರವಾನ್ವಿತ ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು? ನಮ್ಮ ಸರ್ಕಾರದಲ್ಲಿ ನೇಮಕಾತಿಯಿಂದ ಹಿಡಿದು ವರ್ಗಾವಣೆಯ ವರೆಗೆ ಎಲ್ಲವನ್ನೂ ಪಾರದರ್ಶಕವಾಗಿಸುವ, ಯಾವುದೇ ರೀತಿಯ ಹಣ, ಅಧಿಕಾರದ ದುರ್ಬಳಕೆಯಾಗದಂತೆ ತಡೆಯುವ ಪ್ರಯತ್ನ ಜಾರಿಯಲ್ಲಿದೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದಲ್ಲಿ ಸ್ವಚ್ಚ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ.
- ಮುಖ್ಯಮಂತ್ರಿ @siddaramaiah


ಹೀಗೆ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ.  ಜೊತೆಗೆ ಉಪಲೋಕಾಯುಕ್ತರ ಹೇಳಿಕೆಗೂ ಸ್ಪಷ್ಟನೆ ಕೊಟ್ಟಂತಾಗಿದೆ. 


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

CM clarification to UPA LOKAYUKUTA STATEMENT ON CORRUPTION
Advertisment
Advertisment
Advertisment