/newsfirstlive-kannada/media/media_files/2025/11/21/magadi-balakrishan-and-ramesh-babu-2025-11-21-14-19-52.jpg)
ರಾಜ್ಯದಲ್ಲಿ ಈಗ ಮತ್ತೊಮ್ಮೆ ಜಾತಿ ಆಧಾರದ ಮೇಲೆ ಸಿಎಂ ಸ್ಥಾನ ಕೇಳುವ ಹಳೆಯ ಸಂಪ್ರದಾಯ ಪುನರಾವರ್ತನೆಯಾಗುತ್ತಿದೆ. ಕುರುಬ ಸಮುದಾಯದ ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷ ಅವಧಿ ಪೂರ್ಣಗೊಳಿಸಿದ್ದಾರೆ. ಇನ್ನೂಳಿದ ಎರಡೂವರೆ ವರ್ಷದ ಸಿಎಂ ಸ್ಥಾನವನ್ನು ಒಕ್ಕಲಿಗ ಸಮುದಾಯದ ಡಿಕೆ ಶಿವಕುಮಾರ್ ಅವರಿಗೆ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರು ಪ್ರಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ನಂಬಿ ಒಕ್ಕಲಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಜೆಡಿಎಸ್ ಪಕ್ಷ 19 ಸ್ಥಾನಗಳಿಗೆ ಮಾತ್ರ ಸೀಮಿತವಾಯಿತು. ಈಗ ಇನ್ನೂಳಿದ ಎರಡೂವರೆ ವರ್ಷದ ಸಿಎಂ ಸ್ಥಾನವನ್ನು ಡಿಕೆಶಿಗೆ ನೀಡಬೇಕೆಂದು ಒಬ್ಬೊಬ್ಬರಾಗಿ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರು ಬಹಿರಂಗವಾಗಿ ಆಗ್ರಹಿಸುತ್ತಿದ್ದಾರೆ.
ಆದರೇ, ಇದರ ಮಧ್ಯೆಯೇ ಸಿಎಂ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಒಕ್ಕಲಿಗ ಸಮುದಾಯದ ಶಾಸಕರಿಗೆ ಪೋನ್ ಮಾಡಿ ಸಿದ್ದರಾಮಯ್ಯ ಮಾತನಾಡಿದ್ದಾರೆ.
/filters:format(webp)/newsfirstlive-kannada/media/media_files/2025/11/21/tbj-and-mla-shivalinge-gowda-2025-11-21-14-16-44.jpg)
ಶಿರಾ ಕ್ಷೇತ್ರದ ಟಿ.ಬಿ.ಜಯಚಂದ್ರ, ಅರಸೀಕೆರೆ ಕ್ಷೇತ್ರದ ಕೆ.ಎಂ.ಶಿವಲಿಂಗೇಗೌಡ, ಮಾಗಡಿ ಕ್ಷೇತ್ರದ ಎಚ್.ಸಿ.ಬಾಲಕೃಷ್ಣ, ಶ್ರೀರಂಗಪಟ್ಟಣ ಕ್ಷೇತ್ರದ ರಮೇಶ್ ಬಾಬುಗೆ ಸಿಎಂ ಸಿದ್ದರಾಮಯ್ಯ ಪೋನ್ ಮಾಡಿ ಮಾತನಾಡಿದ್ದಾರೆ. ತಮ್ಮ ಪರವಾಗಿ ನಿಲ್ಲುವಂತೆ ಮನವೊಲಿಸುವ ಕೆಲಸ ಮಾಡಿದ್ದಾರೆ.
ಆತುರದ ನಿರ್ಧಾರ ಬೇಡ, ನೀವೆಲ್ಲ ಮುಂದೆ ಸಚಿವರಾಗಬೇಕಾದವರು, ದೆಹಲಿ, ನಾಯಕತ್ವ ಎಂದು ಗೊಂದಲ ಮೂಡಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ದೂರವಾಣಿ ಮಾತುಕತೆ ವೇಳೆ ಕಾಂಗ್ರೆಸ್ ಶಾಸಕರಿಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us