ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು : ಇ.ಡಿ.ಯಿಂದ ಬಂಧನವಾಗಿ ಜೈಲು ಪಾಲಾಗಿದ್ದ ವೀರೇಂದ್ರ ಪಪ್ಪಿ

ಬೆಟ್ಟಿಂಗ್ ಆ್ಯಪ್ ಹಾಗೂ ಆಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇ.ಡಿ.ಯಿಂದ ಬಂಧನಕ್ಕೊಳಗಾಗಿದ್ದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

author-image
Chandramohan
MLA VEERENDRA PAPPY ARREST

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

Advertisment
  • ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು
  • ಇ.ಡಿ. ದಾಖಲಿಸಿದ್ದ ಕೇಸ್ ನಲ್ಲಿ ಜಾಮೀನು ಮಂಜೂರು
  • ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿಂದ ಜಾಮೀನು ಮಂಜೂರು

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿದೆ.  ಅಕ್ರಮ ಬೆಟ್ಟಿಂಗ್​ ಕೇಸ್​ನಲ್ಲಿ ವೀರೇಂದ್ರ ಪಪ್ಪಿ ಜೈಲು ಪಾಲಾಗಿದ್ದರು. ಇ.ಡಿ. ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಆಕ್ರಮ ಹಣ ವರ್ಗಾವಣೆ  ಆರೋಪದಡಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಈಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಕಾಂಗ್ರೆಸ್  ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಆಗಿದೆ.  


ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Congress CONGRESS MLA VEERENDRA PAPPY GRANTED BAIL MLA VEERENDRA PAPPY
Advertisment