‘ಹೈಕಮಾಂಡ್ ಒಪ್ಪಿದ್ರೆ ನಾನೇ..’ CM ಹೇಳಿಕೆಗೆ ಡಿಕೆಶಿ ರಿಯಾಕ್ಷನ್ ಏನು ಗೊತ್ತಾ..?

ಹೈಕಮಾಂಡ್ ಒಪ್ಪಿದರೆ ನಾನೇ ಪೂರ್ಣಾವಧಿ ಸಿಎಂ ಎಂದು ಸಿದ್ದರಾಮಯ್ಯ ಮಂಗಳೂರಿನಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಏನು ಹೇಳಿದ್ದಾರೆ ಅನ್ನೋ ವಿವರ ಇಲ್ಲಿದೆ.

author-image
Ganesh Kerekuli
dK shivakumar (1)
Advertisment

ಇಷ್ಟು ದಿನ ನಾನೇ ಪೂರ್ಣಾವಧಿ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಇಂದು ಸ್ವಲ್ಪ ರಾಗ ಬದಲಾಯಿಸಿದ್ದಾರೆ. ಹೈಕಮಾಂಡ್ ಒಪ್ಪಿದರೆ ನಾನೇ ಪೂರ್ಣಾವಧಿ ಸಿಎಂ ಎಂದು ಸಿದ್ದರಾಮಯ್ಯ ಮಂಗಳೂರಿನಲ್ಲಿ ಹೇಳಿದ್ದಾರೆ.

ಅವರ ಹೇಳಿಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನನ್ನ ದೆಹಲಿ ಪ್ರವಾಸದ ಬಗ್ಗೆ ಚರ್ಚೆ ಏನು ಬೇಕಾದರೂ ಮಾಡಿಕೊಳ್ಳಿ. ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ಹೋಗಿರುವ ಕೆಲಸದ ಬಗ್ಗೆ ಮಾತ್ರ ಹೇಳುತ್ತೇನೆ. ಸಿಎಂ ಹೇಳಿದ ಮೇಲೆ ಇನ್ನೇನಿದೆ..? ಅವರು ಏನು ಹೇಳುತ್ತಾರೋ, ನಾವು ಹಾಗೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ. 

ಸಿದ್ದರಾಮಯ್ಯ ಹೇಳಿದ್ದೇನು..? 

ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರುವವರನ್ನು ತಪ್ಪಿಸಲು ಆಗಲ್ಲ. ಸ್ಪರ್ಧೆಯಲ್ಲಿ ಇರಬೇಡಿ ಎಂದು ಹೇಳಲು ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಕೇಳೋದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೇಳುವ, ಕೇಳುವ ಹಕ್ಕು ಎಲ್ಲರಿಗೂ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದಿದ್ದಾರೆ. 

ಇದನ್ನೂ ಓದಿ: Breaking News: ಹೈಕಮಾಂಡ್ ಒಪ್ಪಿದ್ರೆ ನಾನೇ ಪೂರ್ಣಾವಧಿ ಸಿಎಂ ಎಂದ ಸಿದ್ದರಾಮಯ್ಯ! ಹಾಗಾದರೆ ಹೈಕಮಾಂಡ್ ತೀರ್ಮಾನ ಏನು?

CM SIDDU AND DKS WATCHING CHAIR

ಹೀಗಾಗಿ ಈಗ ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಏನಾದರೂ ಸಿಎಂ ಸ್ಥಾನದಲ್ಲಿರುವವರನ್ನು ಬದಲಾವಣೆ ಮಾಡಿ ಬೇರೆಯವರನ್ನು ಸಿಎಂ ಸ್ಥಾನದಲ್ಲಿ ಕೂರಿಸುತ್ತಾ?, ಸಿಎಂ ಸ್ಥಾನ ತ್ಯಾಗ ಮಾಡಿ, ಬೇರೆಯವರಿಗೆ ಬಿಟ್ಟುಕೊಡಿ ಎಂದು ಹೇಳುತ್ತದೆಯೇ ಎಂಬುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಮುಂದಿನ ತಿಂಗಳು ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡೂವರೆ ವರ್ಷವನ್ನು ಪೂರ್ಣಗೊಳಿಸುತ್ತಿದ್ದಾರೆ. ಹೀಗಾಗಿ ಎರಡೂವರೆ ವರ್ಷ ಪೂರ್ಣಗೊಂಡ ಬಳಿಕ ಸಿಎಂ ಸ್ಥಾನವನ್ನು ಕಾಂಗ್ರೆಸ್ ಹೈಕಮಾಂಡ್ ಬೇರೆಯವರಿಗೆ ನೀಡುತ್ತಾ ಇಲ್ಲವೇ ಸಿದ್ದರಾಮಯ್ಯರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರಿಸುತ್ತಾ ಎಂಬುವುದು ಕಾದು ನೋಡಬೇಕು.

ಇದನ್ನೂ ಓದಿ: ರಾಶಿಕಾರ ‘ಲವ್ ಬುಟ್ಟಿ’ಯಲ್ಲಿ ಸೂರಜ್ ಪರವಶ.. ಗೇಮ್​​ನಲ್ಲಿ ತಮಾಷೆಗೆ ಲೈನ್ ಹೊಡೆಯೋಕೂ ಬೇಕು ಪರ್ಮಿಷನ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH DK Shivakumar
Advertisment