/newsfirstlive-kannada/media/media_files/2025/11/29/dk-shivakumar-siddaramaiah-1-2025-11-29-10-15-12.jpg)
ನಾಳೆ ಡಿಕೆಶಿ ಮನೆಯಲ್ಲಿ ಸಿಎಂಗೆ ಬ್ರೇಕ್ ಫಾಸ್ಟ್ ಗೆ ಆಹ್ವಾನ
ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರನ್ನು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಆಹ್ವಾನಿಸಿದ್ದರು. ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಸರದಿ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಸಿಎಂ ಸಿದ್ದರಾಮಯ್ಯರನ್ನು ಬ್ರೇಕ್ ಫಾಸ್ಟ್ ಗೆ ಆಹ್ವಾನಿಸಿದ್ದಾರೆ. ನಾಳೆ ( ಮಂಗಳವಾರ, ಡಿಸೆಂಬರ್ 2) ಬೆಂಗಳೂರಿನ ಡಿಸಿಎಂ ಮನೆಯಲ್ಲಿ ಸಿಎಂ- ಡಿಸಿಎಂ ಡಿಕೆಶಿ ನಡುವೆ ಮತ್ತೊಂದು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ.
ಈ ಹಿಂದೆ 2023ರ ವಿಧಾನಸಭಾ ಚುನಾವಣೆಗೂ ಮುನ್ನ ಒಮ್ಮೆ ಸಿಎಂ ಸಿದ್ದರಾಮಯ್ಯ, ಸದಾಶಿವನಗರದ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದರು. ಆಗ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಇಬ್ಬರೂ ಸಿದ್ದರಾಮಯ್ಯರನ್ನು ತಮ್ಮ ಮನೆಗೆ ಹೂಗುಚ್ಛ ನೀಡಿ ಸ್ವಾಗತಿಸಿದ್ದರು. ಈಗ ಮತ್ತೊಮ್ಮೆ ಡಿ.ಕೆ.ಸೋದರರು ಸಿಎಂ ಸಿದ್ದರಾಮಯ್ಯರನ್ನು ತಮ್ಮ ಮನೆಗೆ ಸ್ವಾಗತಿಸಲು ಮುಹೂರ್ತ ನಿಗದಿಯಾಗಿದೆ.
ಇನ್ನೂ ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ನನ್ನದು ಸಿಎಂಗೆ ಸಂಬಂಧಿಸಿದ ವಿಷಯ .
ನಾವು ಬ್ರದರ್ಸ್ ತರಹ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಇಂದು ಹೇಳಿದ್ದಾರೆ.
ಡಿಸಿಎಂ ಒಂದು ಗುಂಪು, ಸಿಎಂ ಅವರದ್ದು ಒಂದು ಗುಂಪು ಎಂದು ನೀವು ಮಾಧ್ಯಮಗಳಲ್ಲಿ ಹೇಳುತ್ತಿದ್ದೀರಿ. ಆದರೇ, ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ನಾವಿಬ್ಬರೂ ಬ್ರದರ್ಸ್ ತರಹ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ನನಗೆ ಯಾವುದೇ ಗುಂಪು ಇಲ್ಲ. ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಯಾವುದೇ ಗುಂಪು ಏಕೆ ಬೇಕು? ನೀವೆಲ್ಲಾ ಏನೇನೋ ತೋರಿಸುತ್ತಿದ್ದೀರಾ, ಸಿದ್ದರಾಮಯ್ಯ ಅವರದ್ದು ಒಂದು ಗುಂಪು ಮತ್ತು ಡಿಕೆಶಿ ಗುಂಪು ಅಂತ ತೋರಿಸುತ್ತಿದ್ದೀರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
/filters:format(webp)/newsfirstlive-kannada/media/media_files/2025/11/29/dk-shivakumar-siddaramaiah-2025-11-29-10-07-35.jpg)
ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ಸಾರ್ವಜನಿಕವಾಗಿ ಸ್ಪಷ್ಟಪಡಿಸುವ ಕೆಲಸವನ್ನು ಮತ್ತೊಮ್ಮೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ.
ಕೆಂಗಲ್ ಹನುಮಂತಯ್ಯ ವಿಧಾನಸೌಧ ಕಟ್ಟಿದ್ದರು. ಎಸ್. ಎಂ. ಕೃಷ್ಣ ವಿಕಾಸಸೌಧ ಕಟ್ಟಿದ್ದರು. ಬೆಂಗಳೂರನ್ನು ಕೆಂಪೇಗೌಡರು ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ಟು ಹೋಗಿದ್ದಾರೆ . ಯಾರಿಗೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಮೀಟಿಂಗ್ ನಮಗೇನೂ ಅಗತ್ಯ ಇಲ್ಲ . ನಮ್ಮಲ್ಲಿ ಯಾವುದೇ ಗುಂಪಿಲ್ಲ . 140 ಜನ ಶಾಸಕರು ಒಟ್ಟಿಗೆ ಇದ್ದಾರೆ. ಎಲ್ಲರನ್ನೂ ಕರೆದೊಯ್ಯುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us