/newsfirstlive-kannada/media/media_files/2025/08/06/dk-shivakumar-vs-tejaswi-surya-2025-08-06-22-20-59.jpg)
ಡಿಕೆ ಶಿವಕುಮಾರ್ ಮತ್ತು ತೇಜಸ್ವಿ ಸೂರ್ಯ
ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್ ಡೌನ್ ಆರಂಭವಾಗಿದೆ.. ಆಗಸ್ಟ್ 10ರಂದು ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.. ಈ ಮಧ್ಯೆ ಡಿಕೆಶಿ ಮತ್ತು ತೇಜಸ್ವಿ ನಡುವೆ ಮೆಟ್ರೋ ಟಾಕ್ವಾರ್ಗೆ ವೇದಿಕೆ ಸಹ ಸೃಷ್ಟಿಯಾಗಿದೆ.
ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ಧಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಜಧಾನಿಗೆ ನಮೋ!
ಆಗಸ್ಟ್ 10ರಂದು ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ ಬೆಳಗ್ಗೆ 10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.. ಬೆಳಗ್ಗೆ 10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಎಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮಿಸಿ ರಸ್ತೆ ಮೂಲಕ ಬೆಳಗ್ಗೆ 11ಗಂಟೆಗೆ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿಕೊಡಲಿದ್ದಾರೆ.. ಬೆಳಗ್ಗೆ 11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿ ಬಳಿಕ ಬೆಳಗ್ಗೆ 11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ..
ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಕೇಸ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಳಗ್ಗೆ 11.50ರಿಂದ ಮಧ್ಯಾಹ್ನ 12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿರುವ ನಮೋ ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಮಾಡಲಿದ್ದಾರೆ.. ಬಳಿಕ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತದ ಕಾಮಗಾರಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.. ಮಧ್ಯಾಹ್ನ 1 ಗಂಟೆಯಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.. ಮಧ್ಯಾಹ್ನ 2.05ಕ್ಕೆ ಹೆಲಿಕಾಪ್ಟರ್ ಮೂಲಕ HAL ವಿಮಾನ ನಿಲ್ದಾಣಕ್ಕೆ ವಾಪಸ್ ಆಗಲಿರುವ ಮೋದಿ ಮಧ್ಯಾಹ್ನ 2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಡಿಸಿಎಂ ಡಿಕೆಶಿ ಮತ್ತು ಸಂಸದ ತೇಜಸ್ವಿ ನಡುವೆ ಮೆಟ್ರೋ ಫೈಟ್!
ಹಳದಿ ಲೈನ್ ಮಟ್ರೋ ವಿಚಾರ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಂಸದ ತೇಜಸ್ವಿ ಸೂರ್ಯ ಮಧ್ಯೆ ಜಿದ್ದಾಜಿದ್ದಿನ ಕದನಕ್ಕೆ ವೇದಿಕೆಯಾಗಿದೆ.. ಈ ಹಿಂದೆ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿದ್ದ ಡಿಕೆಶಿ, ತೇಜಸ್ವಿ ಸೂರ್ಯಗೆ ಅನುಭವ ಇಲ್ಲ, ಆತುರದಲ್ಲಿ ಇಂತ ನಿರ್ಧಾರ ಮಾಡಬಾರದು ಎಂದಿದ್ರು.. ಈ ಮಾತಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೆಹಲಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.. ನಾನು ಈ ತಲೆಮಾರಿನ ಹುಡುಗ.. ಎಲ್ಲ ಕೆಲಸವು ವೇಗವಾಗಿ ಆಗಬೇಕು ಎನ್ನುವ ಮೂಲಕ ಡಿಕೆಶಿಗೆ ಟಾಂಗ್ ನೀಡಿದ್ದಾರೆ.
ಒಟ್ಟಿನಲ್ಲಿ ಹಳದಿ ಮೆಟ್ರೋ ಮಾರ್ಗ ಆರಂಭದಲ್ಲೇ ನಾಯಕರ ನಡುವೆ ಟಾಕ್ವಾರ್ ಜೋರಾಗಿದೆ. ಮೋದಿ ಉದ್ಘಾಟನೆ ಕಾರ್ಯಕ್ರಮಕ್ಕೂ ಈ ಮಾತಿನ ಮುನಿಸಿನ ಬಿಸಿ ತಟ್ಟುತ್ತಾ ಕಾದು ನೋಡಬೇಕಿದೆ.
ಇದನ್ನೂ ಓದಿ: ದೆಹಲಿಯಲ್ಲಿ ಮದುವೆ ಅರತಕ್ಷತೆ ಮಾಡಿಕೊಂಡ ಮೌಹಾ ಮೋಯಿತ್ರ- ಪಿನಾಕಿ ಮಿಶ್ರಾ ದಂಪತಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ