/newsfirstlive-kannada/media/media_files/2025/10/27/cm-siddu-and-dks-watching-chair-2025-10-27-17-29-23.jpg)
KPCC ಅಧ್ಯಕ್ಷ ಸ್ಥಾನ ತ್ಯಜಿಸುವ ಸುಳಿವು ನೀಡಿದ ಡಿಕೆಶಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತ್ಯಾಗದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ನಾನು ಪರ್ಮನೆಂಟ್ ಆಗಿ ಇರುವುದಕ್ಕೆ ಆಗಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಐದೂವರೆ ವರ್ಷವಾಯಿತು . ಇನ್ನೂ ಸ್ವಲ್ಪ ದಿನ ಕಳೆದರೇ, ಆರು ವರ್ಷವಾಗುತ್ತೆ. ಡಿಸಿಎಂ ಆದ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಬೇಕೆಂದು ನಿರ್ಧರಿಸಿದ್ದೆ. ಆದರೇ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರಿಯಿರಿ ಎಂದು ಹೇಳಿದ್ದರು. ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬಹುದು ಎಂಬ ಚರ್ಚೆಗೆ ನಾಂದಿ ಹಾಡಿದ್ದಾರೆ. ಬಹುಶಃ ಸಿಎಂ ಹುದ್ದೆ ಸಿಕ್ಕರೇ, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಬೇರೆಯವರಿಗೆ ಬಿಟ್ಟುಕೊಡಬಹುದು. ಡಿ.ಕೆ.ಶಿವಕುಮಾರ್ ಕಣ್ಣು ಮತ್ತು ಗುರಿ ಎರಡೂ ಸಿಎಂ ಸ್ಥಾನದ ಮೇಲಿದೆ.
ನಾನು ಎಲ್ಲಿರುತ್ತೇನೋ ಎಲ್ಲಿ ಇರುವುದಿಲ್ಲವೋ ಎನ್ನುವುದು ಮುಖ್ಯ ಅಲ್ಲ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದೇ ನಮ್ಮ ಉದ್ದೇಶ. ಪವರ್ ವಿಚಾರ ಮುಖ್ಯ ಅಲ್ಲ, ಶ್ರಮಕ್ಕೆ ಫಲ ಸಿಗುತ್ತದೆ . ಎಲ್ಲಿ ಮನಸ್ಸಿದೆಯೋ ಅಲ್ಲಿ ಮಾರ್ಗ ಇದೆ . ಎಲ್ಲಿ ಭಕ್ತಿ ಇದೆಯೋ ಅಲ್ಲಿ ಫಲ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾರ್ಮಿಕವಾಗಿ ಹೇಳಿದ್ದಾರೆ.
ನಾನು ಅಧಿಕಾರದಲ್ಲಿ ಇರುತ್ತೇನೋ ಇರಲ್ವೋ ಅದು ಇಂಪಾರ್ಟೆಂಟ್ ಅಲ್ಲ . ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು . ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ಬರಬಾರದು ಎಂಬುದಷ್ಟೇ ಮುಖ್ಯ. ಪರ್ಮನೆಂಟ್ ಆಗಿ ಮುಂದುವರಿಯೋಕಾಗಲ್ಲ . ಕೆಲವರು ಪಕ್ಷದ ಕಚೇರಿಯನ್ನೇ ಮರೆತುಬಿಟ್ಟಿದ್ದಾರೆ . ಪಕ್ಷ ಅಂದ್ರೆ ದೇವಸ್ಥಾನ ಎನ್ನುವುದನ್ನೇ ಕೆಲವರು ಮರೆತಿದ್ದಾರೆ . ಯಾರೂ ನೂರು ಕೆಪಿಸಿಸಿ ಕಟ್ಟಡ ಕಟ್ಟಲು ಆಸಕ್ತಿ ವಹಿಸಲ್ಲ ಅಂಥವರ ಪಟ್ಟಿ ನಾನು ಹೈಕಮಾಂಡ್ ಗೆ ನೀಡುತ್ತೇನೆ . ಅವರಿಗೆಲ್ಲ ನಾನು ಉತ್ತರ ಕೊಡೋದಕ್ಕೆ ಹೋಗಲ್ಲ, ಎಲ್ಲದಕ್ಕೂ ದೆಹಲಿಯವರೇ ಉತ್ತರ ಕೊಡ್ತಾರೆ . ಯಾರು ಪಕ್ಷದ ಕೆಲಸಕ್ಕೆ ಆಸಕ್ತಿ ವಹಿಸಲ್ಲ ಅವರಿಗೆ ದೆಹಲಿಯವರು ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಿಗೆ ಕಟ್ಟಡವನ್ನು ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಕಟ್ಟದೇ ಇದ್ದರೇ, ಅಂಥವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗೋದು ಡೌಟ್ ಎಂಬ ಸಂದೇಶವನ್ನು ಈ ಮೂಲಕ ಡಿ.ಕೆ.ಶಿವಕುಮಾರ್ ರವಾನಿಸಿದ್ದಾರೆ. ಹೀಗಾಗಿ ವಿಧಾನಸಭಾ ಟಿಕೆಟ್ ಆಕಾಂಕ್ಷಿಗಳಿಗೆ ತಮ್ಮ ತಮ್ಮ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಿಸುವ ಜವಾಬ್ದಾರಿಯನ್ನು ನೀಡುತ್ತಿದ್ದಾರೆ.
/filters:format(webp)/newsfirstlive-kannada/media/post_attachments/wp-content/uploads/2023/11/DKS.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us