/newsfirstlive-kannada/media/media_files/2025/11/04/bengaluru-skill-summit-1-2025-11-04-19-10-33.jpg)
* ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 3,08,267 ಅರ್ಹ ಫಲಾನುಭವಿಗಳಿಗೆ 913 ಕೋಟಿ ರೂ. ಮೊತ್ತದ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ.
255. ಇಲಾಖೆಯ ವಿವಿಧ ಯೋಜನೆ ಹಾಗೂ ಸಂಸ್ಥೆಗಳಡಿ ಒಟ್ಟಾರೆ 80,086 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ. ಯುವಕ/ಯುವತಿಯರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು CMKKY 2.0 ಜಾರಿಗೊಳಿಸಲಾಗಿದೆ.
* ನಮ್ಮ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ 11 ಬೃಹತ್ ಉದ್ಯೋಗ ಮೇಳಗಳಲ್ಲಿ ಒಟ್ಟು 1.16 ಲಕ್ಷ ಅಭ್ಯರ್ಥಿಗಳು ಹಾಗೂ 1,946 ಉದ್ಯೋಗದಾತರು ಭಾಗವಹಿಸಿದ್ದು, 19,863 ಅಭ್ಯರ್ಥಿಗಳು ಆಯ್ಕೆಗೊಂಡಿರುತ್ತಾರೆ. 35,983 ಅಭ್ಯರ್ಥಿಗಳಿಗೆ ಉದ್ಯೋಗ ನಿಯೋಜಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
* ರಾಜ್ಯದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್ಡಿಎ ಮತ್ತು ಜೆಟಿಎಸ್ಗಳ ಮೂಲಭೂತ ಸೌಕರ್ಯ ಮತ್ತು ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ADB ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ಐದು ವರ್ಷಗಳ ಅವಧಿಯ "K-QUEST" (KARNATAKA – Quality Upgradation for Employment and Skills Transformation) ಯೋಜನೆಯನ್ನು ಜಾರಿಗೊಳಿಸಲಾಗುವುದು.
* ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ PM- SETU ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಮತ್ತು ಉದ್ದಿಮೆಗಳ ಸಹಭಾಗಿತ್ವದಲ್ಲಿ Hub & Spoke ಮಾದರಿಯಲ್ಲಿ ಕ್ಲಸ್ಟರ್ಗಳನ್ನಾಗಿ ಉನ್ನತೀಕರಿಸಲಾಗುವುದು. 2026-27ನೇ ಸಾಲಿನಲ್ಲಿ ಎರಡು ಕ್ಲಸ್ಟರ್ ಗಳನ್ನು 241 ಕೋಟಿ ರೂ. ಘಟಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.
* ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric) ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.
*ಐಟಿಐ ಕಲಿತ ವಿದ್ಯಾರ್ಥಿನಿಯರಿಗೆ ಉದ್ಯಮಗಳಲ್ಲಿ ವಿಪುಲವಾದ ಉದ್ಯೋಗಾವಕಾಶಗಳಿದ್ದು, ಹೆಣ್ಣುಮಕ್ಕಳ ಪ್ರವೇಶ ಹೆಚ್ಚಿಸಲು ಮಹಿಳಾ ತರಬೇತಿದಾರರಿಗೆ 1,200 ರೂ.ಗಳ ವಾರ್ಷಿಕ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುವುದು.
* ಐಟಿಐ ವಿದ್ಯಾರ್ಥಿಗಳಿಗೆ ಎರಡು ಹೆಚ್ಚುವರಿ ವಿಷಯಗಳಲ್ಲಿ ಬೋಧನೆ ಮಾಡುವ ಮೂಲಕ ಉನ್ನತ ವ್ಯಾಸಂಗ ಅಥವಾ ಉತ್ತಮ ಉದ್ಯೋಗ ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಪದವಿ ಪೂರ್ವ ಪ್ರಮಾಣ ಪತ್ರವನ್ನು ನೀಡಲಾಗುವುದು.
* ಕೊಪ್ಪಳದ ಜಿಟಿಟಿಸಿ–ಎಂಎಸ್‌ಡಿಸಿಯಲ್ಲಿ M/s Aequs Toy Cluster Industry ಯ ಕಾರ್ಯತಂತ್ರದ ಸಹಯೋಗದೊಂದಿಗೆ Precision Tool Engineering ನಲ್ಲಿ ತಂತ್ರಜ್ಞಾನ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು.
* ಜಿಲ್ಲೆಗಳಲ್ಲಿ ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ Challenge fund ಸ್ಥಾಪಿಸಲಾಗುವುದು. ಈ ನಿಧಿ ಸ್ಥಳೀಯ ಕಾರ್ಮಿಕ ಹಾಗೂ ಉದ್ಯೋಗ ಸಂಬಂಧಿತ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.
* ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (KSDA) ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜೊತೆಗೂಡಿ ಕರ್ನಾಟಕ ಕೌಶಲ್ಯ ಬುದ್ಧಿಮತ್ತೆ ಮತ್ತು ಕಾರ್ಯತಂತ್ರ ಘಟಕವನ್ನು (KSISU) ಸ್ಥಾಪಿಸಲಾಗುವುದು. ಆಯ್ದ ದೇಶಗಳು ಮತ್ತು ಸಂಸ್ಥೆಗಳೊಂದಿಗೆ ಪಾಲುದಾರಿಕೆಯ ಮೂಲಕ ಜಾಗತಿಕ ಕೌಶಲ್ಯ ಮೈತ್ರಿಕೂಟಗಳನ್ನು ಆರಂಭಿಸಲಾಗುವುದು.
* ಬಹು ವೇದಿಕೆಗಳ ಮೂಲಕ ಪ್ರಸ್ತುತ ನೀಡಲಾಗುತ್ತಿರುವ ಎಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಮತ್ತು ಸೇವೆಗಳನ್ನು ಸಂಯೋಜಿಸಿ ಏಕೀಕೃತ ಕೌಶಲ್ಯ ಅಭಿವೃದ್ಧಿ ಪೋರ್ಟಲ್ ಅನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
* ಗ್ರಾಮೀಣ ಭಾಗದಲ್ಲಿ ವಯೋವೃದ್ಧರ ಕ್ಷೇಮಾಭಿವೃದ್ಧಿ ಜೊತೆಗೆ ಬಾಣಂತಿಯರು ಹಾಗೂ ಶಿಶುಗಳ ಆರೈಕೆ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾನ್ಯತೆ ಪಡೆದ ಸಂಸ್ಥೆಗಳ ಮೂಲಕ ʻಆರೈಕೆ ಉದ್ಯಮಶೀಲತಾ ತರಬೇತಿʼಯನ್ನು ನೀಡಲಾಗುವುದು.
* 2026 ಅನ್ನು ʻಅಂತಾರಾಷ್ಟ್ರೀಯ ರೈತ ಮಹಿಳಾ ವರ್ಷʼವೆಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಉತ್ತೇಜನದೊಂದಿಗೆ ಸುಸ್ಥಿರ ಮತ್ತು ದೀರ್ಘಾವಧಿಯ ಗ್ರಾಮೀಣಾಭಿವೃದ್ಧಿಗಾಗಿ 5,000 ರೈತ ಮಹಿಳೆಯರಿಗೆ ಆಧುನಿಕ ಕೃಷಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುವುದು.
* ನಗರ ಪ್ರದೇಶಗಳ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಒದಗಿಸಲು ಸಮೀಕ್ಷೆ ನಡೆಸುವುದು, ಗುರುತಿನ ಚೀಟಿಗಳು ಮತ್ತು ಮಾರಾಟ ಪ್ರಮಾಣ ಪತ್ರಗಳನ್ನು ನೀಡಲು ಹಾಗೂ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸುವುದಕ್ಕಾಗಿ ಏಳು ಕೋಟಿ ರೂ.ಗಳನ್ನು ಒದಗಿಸಲಾಗುವುದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us