ಕಳೆದ ಅಧಿವೇಶನದಲ್ಲಿ ಡಿಸಿಎಂ ಡಿಕೆಶಿ ಆರ್​ಎಸ್​​ಎಸ್ ಗೀತೆ ಹಾಡಿದ ಬಳಿಕ ಇದೀಗ ಮತ್ತೊಬ್ಬ ಕಾಂಗ್ರೆಸ್​ ನಾಯಕ ಬಿಜೆಪಿ ಬೆಂಬಲಿತ ಎಬಿವಿಪಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದ ಎಬಿವಿಪಿ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭಾಗಿಯಾಗಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ. ವೀರರಾಣಿ ಅಬ್ಬಕ್ಕ ಅವರ 500ನೇ ಜನ್ಮ ಜಯಂತಿ ಪ್ರಯುಕ್ತ ತಿಪಟೂರು ಎಬಿವಿಪಿ ವಿದ್ಯಾರ್ಥಿ ಸಂಘಟನೆ ಶಾಖೆ ವತಿಯಿಂದ ರಥಯಾತ್ರೆ, ಪಂಜಿನ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿಕೆಶಿ ಬಳಿಕ ಇದೀಗ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿ ವಿಚಾರ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ.
ಇದನ್ನೂ ಓದಿ:ಸ್ಪೀಕರ್ ಯು.ಟಿ. ಖಾದರ್ ಬಗ್ಗೆ ಸಭಾಪತಿ ಹೊರಟ್ಟಿ ಅಸಮಾಧಾನ, ಕೊನೆಗೆ ಒಂದೇ ಸಭೆಯಲ್ಲಿ ಶಮನವಾಗಿದ್ದೇಗೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us