/newsfirstlive-kannada/media/media_files/2025/08/23/backward-classes-commission-survey02-2025-08-23-16-55-10.jpg)
ರಾಜ್ಯದಲ್ಲಿ ಶಾಲೆಗಳ ದಸರಾ ರಜೆ ಅಕ್ಟೋಬರ್ 18ರವರೆಗೆ ವಿಸ್ತರಣೆ
ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆಯನ್ನು ಆಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.
ಶಿಕ್ಷಕರನ್ನು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಭೋಧನೆಗೆ ಬಳಕೆಯಿಂದ ಯಾವುದಕ್ಕೂ ನ್ಯಾಯ ನೀಡಲು ಆಗಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.