/newsfirstlive-kannada/media/media_files/2025/08/15/ed-raids-congress-mla-satish-sails-2025-08-15-16-10-55.jpg)
ಕಾರವಾರ: ಮೊನ್ನೆಯಷ್ಟೇ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಸತೀಶ್ ಸೈಲ್ ಮನೆಯಲ್ಲಿ ಇಲ್ಲದೇ ವೇಳೆ ಇಡಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು.
ಇದನ್ನೂ ಓದಿ: ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಭಾರೀ ಸ್ಫೋಟ; ಜೀವ ಬಿಟ್ಟ ಬಾಲಕ, 9 ಮಂದಿ ಗಂಭೀರ
ಅಧಿವೇಶನದ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಬೆಂಗಳೂರಿಗೆ ತೆರಳಿದ್ದ ವೇಳೆ ಏಕಾಏಕಿ ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕನ ಮನೆಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸಿದ್ದರು. ಇದೇ ದಾಳಿ ವೇಳೆ 14.13 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಪತ್ತೆಯಾಗಿದೆ. ₹1.68 ಕೋಟಿ ನಗದು, 6.75 ಕೆ.ಜಿ. ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಇನ್ನು, ಇಡಿ ಅಧಿಕಾರಿಗಳು ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಸತೀಶ್ ಸೈಲ್‌ಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರೇಡ್ ಮಾಡಿದ್ದಾರೆ. ಕಾರವಾರ, ಗೋವಾ, ಮುಂಬೈ, ದೆಹಲಿಯಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಜಾರಿ ನಿರ್ದೇಶನಾಲಯ ಆಗಸ್ಟ್ 13 ಮತ್ತು 14ರಂದು ದಾಳಿ ಮಾಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ