Advertisment

‘ನಿಮ್ಮನ್ನು ನಂಬಿ ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯ್ತಿರ್ತಾರೆ..’ KN ರಾಜಣ್ಣರಿಂದ ಬೆಂಬಲಿಗರಿಗೆ ಭಾವನಾತ್ಮಕ ನುಡಿ

ಸಚಿವ ಸ್ಥಾನ ಕಳೆದುಕೊಂಡ ಬಳಿಕ ಕೆ.ಎನ್.ರಾಜಣ್ಣ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್​ ಶೇರ್ ಮಾಡಿದ್ದಾರೆ. ಅಭಿಮಾನಿಗಳು ಹಾಗೂ ಬೆಂಬಲಿಗರನ್ನ ಉದ್ದೇಶಿಸಿ ಬರೆದುಕೊಂಡಿದ್ದಾರೆ.

author-image
Ganesh Kerekuli
kn rajanna statement

ಕೆಎನ್ ರಾಜಣ್ಣ

Advertisment

ಸಚಿವ ಸ್ಥಾನ ಕಳೆದುಕೊಂಡ ಬಳಿಕ ಕೆ.ಎನ್.ರಾಜಣ್ಣ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್​ ಶೇರ್ ಮಾಡಿದ್ದಾರೆ. ಅಭಿಮಾನಿಗಳು ಹಾಗೂ ಬೆಂಬಲಿಗರನ್ನ ಉದ್ದೇಶಿಸಿ ತಮ್ಮ ಮನದಾಳವನ್ನು ಬರೆದುಕೊಂಡಿದ್ದಾರೆ.

Advertisment

ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಹಾಗೂ ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ ಎಂದಿದ್ದಾರೆ.

ರಾಜಣ್ಣ ಏನು ಬರೆದಿದ್ದಾರೆ..?

ಆತ್ಮೀಯರೇ..

ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ದೃಢಿಗೆಟ್ಟವನಲ್ಲ, ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ. ನಿಮ್ಮಲ್ಲಿ ನನ್ನ ವಿನಂತಿ ಏನೆಂದರೆ, ಯಾವುದೇ ಕಾರಣಕ್ಕೂ ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದೆ.

ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯುತ್ತಿರುತ್ತಾರೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ.

ಹಾಗಾಗಿ, ಯಾವುದೇ ತಪ್ಪು ನಿರ್ಧಾರ ಮಾಡಬೇಡಿ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ. ನಾವೆಲ್ಲರೂ ಬುದ್ಧ, ಬಸವ, ಅಂಬೇಡ್ಕರ್ ರವರ ಹಾದಿಯಲ್ಲೇ ಸಮಾಜ ಮುಖ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಹಾಗೂ ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ.

ಕೆಎನ್ ರಾಜಣ್ಣ, ಮಾಜಿ ಸಚಿವ 

"ಆತ್ಮೀಯ ಹಾಗೂ ಅಭಿಮಾನಿ ಬಂಧುಗಳಲ್ಲಿ ನನ್ನದೊಂದು ಕೋರಿಕೆ" ಆತ್ಮೀಯರೇ.. ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ರಾಜಕೀಯ ಬದಲಾವಣೆಗೂ...

Posted by K N Rajanna on Tuesday, August 12, 2025
Advertisment

ಇದನ್ನೂ ಓದಿ:ಕೆ.ಎನ್‌.ರಾಜಣ್ಣ ವಜಾ ಹಿಂದೆ ತೆರೆಯ ಹಿಂದೆ ನಡೆದಿದ್ದೇನು? ಸಿದ್ದರಾಮಯ್ಯ ಮಾಡಿದ ಪ್ರಯತ್ನ ವಿಫಲವಾಗಿದ್ದೇಕೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

K N Rajanna resignation KN Rajanna
Advertisment
Advertisment
Advertisment