Advertisment

ಕೃಷ್ಣಾ ಮೇಲ್ದಂಡೆ 3ನೇ ಹಂತದ ಭೂಸ್ವಾಧೀನ, ಪರಿಹಾರದ ಬಗ್ಗೆ ಸೆಪ್ಟೆಂಬರ್‌ 16 ರಂದು ಅಂತಿಮ ನಿರ್ಣಯ: ಸಚಿವ ಎಚ್.ಕೆ. ಪಾಟೀಲ

ಕೃಷ್ಣಾ ಮೇಲ್ದಂಡೆ 3ನೇ ಹಂತದ ಭೂ ಸ್ವಾಧೀನ ಮತ್ತು ಪರಿಹಾರ ಮೊತ್ತದ ಬಗ್ಗೆ ಸೆಪ್ಟೆಂಬರ್ 16 ರಂದು ವಿಶೇಷ ಕ್ಯಾಬಿನೆಟ್ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಅಂದು ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್ ಹೇಳಿದ್ದಾರೆ.

author-image
Chandramohan
MINISTER HK PATIL02

ಕಾನೂನು ಸಚಿವ ಎಚ್‌.ಕೆ.ಪಾಟೀಲ್‌

Advertisment
  • ಕೃಷ್ಣಾ ಮೇಲ್ದಂಡೆ ಭೂ ಸ್ವಾಧೀನದ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆ ನಿಗದಿ
  • ಸೆಪ್ಟೆಂಬರ್ 16ರಂದು ವಿಶೇಷ ಕ್ಯಾಬಿನೆಟ್ ಸಭೆ ನಡೆಸಲು ನಿರ್ಧಾರ
  • ಭೂ ಸ್ವಾಧೀನ, ಪರಿಹಾರ ಮೊತ್ತದ ಬಗ್ಗೆ ಸಭೆಯಲ್ಲಿ ನಿರ್ಧಾರ

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗಳಿಗಾಗಿ ಅವಶ್ಯವಿರುವ ಜಮೀನಿಗೆ ಪರಿಹಾರ ನೀಡಲು ಮತ್ತು ಭೂಸ್ವಾಧೀನ ಕೈಗೊಳ್ಳಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಇದೇ ದಿನಾಂಕ:16.09.2025 ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಎಚ್.ಕೆ ಪಾಟೀಲ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

Advertisment

ಸಚಿವ ಸಂಪುಟ ಸಭೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತವಾದ ಹಾಗೂ ಸಕಾರಾತ್ಮಕ ಚರ್ಚೆ ನಡೆದಿದೆ ಎಂದು  ಸಚಿವ ಎಚ್‌.ಕೆ.ಪಾಟೀಲ್‌ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. 

UPPER KRISHNA 03 PROJECT




ಹೊರಗುತ್ತಿಗೆ ನೌಕರರ ಸೇವಾ ಭದ್ರತೆ ಮತ್ತು ಇತರ ವಿಷಯಗಳಿಗೆ ಸಚಿವ ಸಂಪುಟ ಉಪಸಮಿತಿ. 

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ನಿಗಮ/ಮಂಡಳಿಗಳಲ್ಲಿ ಲಕ್ಷಾಂತರ ಕೆಲಸಗಾರರು (ನೌಕರರು ಎಂದು ಕರೆಸಲ್ಪಡುವವರು) ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಮತ್ತು ಇತರ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಕುರಿತು ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟದ ಉಪಸಮಿತಿಯೊಂದನ್ನು ರಚಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದಿಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. 
ರಾಜ್ಯದ ಎಲ್ಲಾ ಕಾರ್ಮಿಕರ ಹಿತದೃಷ್ಟಿಯಿಂದ ವಿವಿಧ ಇಲಾಖೆಗಳು ಮತ್ತು ಇಲಾಖೆಗಳ ಅಧಿನದಲ್ಲಿರುವ ನಿಗಮ/ಮಂಡಳಿಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಗಳ ಬಗ್ಗೆ ಸೂಕ್ತ ನಿರ್ಣಯ ಸಚಿವ ಸಂಪುಟದ ಉಪಸಮಿತಿ ಕೈಗೊಳ್ಳಲಿದೆ ಎಂದು ತಿಳಿಸಿದರು. 

ಹೊರಗುತ್ತಿಗೆ ನೌಕರರು ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಹಾಗೂ ಅಪಾಯಕಾರಿ ಸೇವೆ ಸಲ್ಲಿಸುವ ನೌಕರರ ಹಿತರಕ್ಷಣೆ ಮಾಡುವ ದೃಷ್ಟಿಯಿಂದ ಸಚಿವ ಸಂಪುಟ ಉಪಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Advertisment
UPPER KRISHNA LAND ACQUISTION AND COMPENSATION
Advertisment
Advertisment
Advertisment