/newsfirstlive-kannada/media/media_files/2025/09/05/siddaramaiah-and-ravikumar-2025-09-05-15-52-35.jpg)
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರವಿಕುಮಾರ್ ವಿರುದ್ಧ ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಕಮಿಷನ್ ವಸೂಲಿ ಮಾಡಿದ ಆರೋಪ ಕೇಳಿಬಂದಿತ್ತು.
ಆರೋಪ ಬೆನ್ನಲ್ಲೇ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ. ಆದರೆ ರವಿಕುಮಾರ್.. ನಾನು ಸಿಎಂ ಅವರನ್ನು ಭೇಟಿ ಮಾಡಿ ತನಿಖೆ ನಡೆಸುವಂತೆ ಮನವಿ ನೀಡಿದ್ದೇನೆ ಎಂದಿದ್ದಾರೆ. ಇಂದು ಬೆಳಗ್ಗೆ ರವಿಕುಮಾರ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.
ಏನಿದು ಆರೋಪ..?
ಎಸ್.ರವಿಕುಮಾರ್ ವಿರುದ್ಧ ಭೂ ಒಡೆತನ ಯೋಜನೆಯಡಿ 60% ಕಮಿಷನ್ ಕೇಳಿದ ಆರೋಪ ಇದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಭೋವಿ ಸಮುದಾಯದ ಭೂ-ರಹಿತ ಕಾರ್ಮಿಕ ಮಹಿಳೆಯರಿಗೆ ಭೂ-ಒಡೆತನ ಯೋಜನೆಯಡಿ ಅನುದಾನ ನೀಡುವುದಾಗಿದೆ. ಈ ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ 60 ಎಕರೆ ಭೂಮಿಯನ್ನು ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡುವ ಉದ್ದೇಶವಿತ್ತು. ಈ ಯೋಜನೆಯ ಫಲಾನುಭವಿಗಳಿಂದ ಶೇಕಡಾ 40 ರಿಂದ 60 ರಷ್ಟು ಕಮಿಷನ್ ವಸೂಲಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಸುಳ್ಳೇ ಸುಳ್ಳು ಎಂದ ರವಿಕುಮಾರ್
ತಮ್ಮ ಮೇಲಿನ ಆರೋಪವನ್ನು ರವಿಕುಮಾರ್ ಅವರು ತಳ್ಳಿ ಹಾಕಿದ್ದಾರೆ. ವಿಡಿಯೋದಲ್ಲಿರುವ ಆಡಿಯೋ ತಮ್ಮದಲ್ಲ, AI ತಂತ್ರಜ್ಞಾನ ಬಳಸಿ ತಿರುಚಲಾಗಿದೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ, ಯಾರಿಗೂ ಕೊಟ್ಟಿಲ್ಲ. ವಿಡಿಯೋವನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳುಹಿಸಿದರೆ ಸತ್ಯ ಬಯಲಿಗೆ ಬರುತ್ತದೆ ಎಂದಿದ್ದಾರೆ.
ಇದನ್ನೂ ಓದಿ:ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.. EVM ಮಿಷನ್ನಲ್ಲಿ ಮತದಾನ ಬೇಡವೇ ಬೇಡ, ಶಿಫಾರಸು
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ