/newsfirstlive-kannada/media/media_files/2025/11/10/jds-core-commitee-m-krishna-reddy-2025-11-10-17-22-27.jpg)
JDS ಕೋರ್ ಕಮಿಟಿಗೆ ಎಂ.ಕೃಷ್ಣಾರೆಡ್ಡಿ, ಶಿಸ್ತುಪಾಲನಾ ಸಮಿತಿಗೆ ಡಿ.ನಾಗರಾಜಯ್ಯ ಅಧ್ಯಕ್ಷರು
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಿದ್ದು, ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.
ಮಾಜಿ ಶಾಸಕ ರಾಜವೆಂಕಟಪ್ಪ ನಾಯಕ ದೊರೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಮೂಲಕ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಿಂದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನ ಎಂ.ಕೃಷ್ಣಾರೆಡ್ಡಿ ಪಾಲಾಗಿದೆ.
ಇನ್ನೂ ಪಕ್ಷದ ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಶ್ರೀ ಡಿ. ನಾಗರಾಜಯ್ಯರನ್ನು ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಶ್ರೀ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಲಾಗಿದೆ. HD ಕುಮಾರಸ್ವಾಮಿ ಅವರು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ಇರುತ್ತಾರೆ.
ಬಹುನಿರೀಕ್ಷಿತ ಜೆಡಿಎಸ್ ಸಮಿತಿಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ನೇಮಕಾತಿ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us