/newsfirstlive-kannada/media/post_attachments/wp-content/uploads/2023/09/Hd-Devegowda.jpg)
ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಹೆಚ್ ಡಿ. ದೇವೇಗೌಡರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ತಡರಾತ್ರಿಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಳಿವಯಸ್ಸಿನಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಟ್ರಕ್ ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗವನ್ನು ದೇವೇಗೌಡ ಭೇಟಿಯಾಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.