/newsfirstlive-kannada/media/media_files/2025/10/10/swamiji-met-devegowda-2025-10-10-16-37-18.jpg)
ಆಸ್ಪತ್ರೆಯಲ್ಲಿದ್ದ ದೇವೇಗೌಡರನ್ನು ಭೇಟಿಯಾಗಿದ್ದ ಆದಿಚುಂಚನಗಿರಿ ಪೀಠಾಧಿಪತಿ
ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ವಾರ ಅನಾರೋಗ್ಯದಿಂದ ದೇವೇಗೌಡ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಮೂತ್ರಸೋಂಕು ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಜಿ ಪ್ರಧಾನಿ ದೇವೇಗೌಡ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿ ದೇವೇಗೌಡರು ಚಿಕಿತ್ಸೆ ಪಡೆಯುತ್ತಿದ್ದರು. ಆ ನಂತರ ಚೇತರಿಕೆ ಕಂಡಿದ್ದ ಹಿನ್ನೆಲೆಯಲ್ಲಿ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಈಗ ಇನ್ನಷ್ಟು ಗುಣಮುಖರಾದ ಕಾರಣ ಆಸ್ಪತ್ರೆಯಿಂದ ಡಿಸಚಾರ್ಜ್ ಮಾಡಲಾಗಿದೆ. ಕಳೆದ ಮಂಗಳವಾರ ರಾತ್ರಿ ಹೆಚ್.ಎ.ಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭನಗರದ ಮನೆಗೆ ದೇವೇಗೌಡರು ಹೊರಟಿದ್ದಾರೆ. ದೇವೇಗೌಡರ ಆರೋಗ್ಯ ವಿಚಾರಿಸಲು ಪುತ್ರ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಯಡಿಯೂರಪ್ಪ, ಶಾಸಕ ಜಿ.ಟಿ. ದೇವೇಗೌಡ ಪುತ್ರ ಹರೀಶ್ ಗೌಡ, ಸಾ.ರಾ.ಮಹೇಶ್, ಶರಣಗೌಡ ಕಂದಕೂರು ಸೇರಿದಂತೆ ಅನೇಕ ಶಾಸಕರು, ನಾಯಕರು ಆಸ್ಪತ್ರೆಯಲ್ಲಿ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ದೇವೇಗೌಡರನ್ನು ಭೇಟಿಯಾಗಿದ್ದರು.
ಈಗ ದೇವೇಗೌಡರು ಆಸ್ಪತ್ರೆಯಿಂದ ಡಿಸಚಾರ್ಜ್ ಆಗಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ.
— Janata Dal Secular (@JanataDal_S) October 13, 2025
ವೈದ್ಯರ ಸೂಚನೆಯಂತೆ ಶ್ರೀ ದೇವೇಗೌಡರಿಗೆ ಇನ್ನೂ 15 ದಿನ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಮುಖಂಡರು,… pic.twitter.com/EzJsGyc22G
ಆಸ್ಪತ್ರೆಯಿಂದ ಡಿಸಚಾರ್ಜ್ ಬಳಿಕ ಪ್ರವಾಹದಿಂದ ತತ್ತರಿಸಿದ್ದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ದೇವೇಗೌಡರು ಪ್ರವಾಸ ಮಾಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದಿಂದ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕೆಂದು ದೇವೇಗೌಡರು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಜೊತೆ ಮಾತುಕತೆ ನಡೆಸಿದ್ದಾರೆ. ನಾನು ಕೂಡ ಪ್ರಧಾನಿ ಮೋದಿ ಅವರ ಜೊತೆಗೆ ಮಾತನಾಡುತ್ತೇನೆ. ನೀವು ಪ್ರಧಾನಿ ಮೋದಿ ಅವರ ಜೊತೆಗೆ ಮಾತನಾಡಿ ಎಂದು ಪ್ರಹ್ಲಾದ್ ಜೋಷಿ ಅವರು ದೇವೇಗೌಡರಿಗೆ ಹೇಳಿದ್ದಾರೆ. ಹೀಗಾಗಿ ಮನೆಗೆ ಹೋದ ಬಳಿಕ ಸೀದಾ ಉತ್ತರ ಕರ್ನಾಟಕ ಭಾಗಕ್ಕೆ ಪ್ರವಾಸ ಹಮ್ಮಿಕೊಂಡು ಖುದ್ದಾಗಿ ಭೀಮಾನದಿ ಪ್ರವಾಹದಿಂದ ಆದ ಹಾನಿಯನ್ನು ದೇವೇಗೌಡರು ವೀಕ್ಷಿಸುವರು. ಬಳಿಕ ಕೇಂದ್ರ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡುವ ಪ್ಲ್ಯಾನ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.