/newsfirstlive-kannada/media/media_files/2025/08/27/hd-devegowda-on-dharmasthala-case-2025-08-27-17-50-43.jpg)
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (H. D. Deve Gowda) ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ದೇವೇಗೌಡರ ಆರೋಗ್ಯದ ಮೇಲೆ ವೈದ್ಯರ ವಿಶೇಷ ತಂಡ ನಿಗಾ ವಹಿಸಿದೆ. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇಂದು ಅವರನ್ನು ಸಾಮಾನ್ಯ ವಾರ್ಡ್​ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಒಂದೆರಡು ದಿನಗಳ ಕಾಲ ಗೌಡರು ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಎಂದು ಆಪ್ತ ಮೂಲಗಳು ಹೇಳಿವೆ.
ತಂದೆ ದೇವೇಗೌಡರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಂಗಳವಾರ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹೆಚ್.ಡಿ.ದೇವೇಗೌಡರ ಆರೋಗ್ಯದ ಬಗ್ಗೆ ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಬಿಗ್​​ಬಾಸ್ ಮನೆಗೆ ಬೀಗ.. ಈಗ ಸ್ಪರ್ಧಿಗಳು ಏನು ಮಾಡ್ತಿದ್ದಾರೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ