Advertisment

ರಾಜ್ಯದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್‌ : ಸರ್ಕಾರದಲ್ಲಿ 24 ಸಾವಿರ ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಒಪ್ಪಿಗೆ-ಸಿಎಂ

ರಾಜ್ಯದ ನಿರುದ್ಯೋಗಿ ಯುವ ಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಇಲಾಖೆಗಳ 24,300 ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದಿದ್ದಾರೆ. ಕಾಲ ಕಾಲಕ್ಕೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

author-image
Chandramohan
CM SIDDARAMAIAH MEETING ON SURVEY
Advertisment


ರಾಜ್ಯದ ನಿರುದ್ಯೋಗಿ ಯುವಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ.  ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಕೈಗೊಂಡಿದ್ದಾರೆ. ರಾಜ್ಯದಲ್ಲಿ 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆಯೇ ಎಂದು ಬಿಜೆಪಿಯ ಉಚ್ಚಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆ ಕೇಳಿದ್ದರು.
ಈ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಲಿಖಿತ  ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ ವಿವಿಧ ಇಲಾಖೆಗಳ   24,300 ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಮಾಡಿಕೊಳ್ಳಲು ರಾಜ್ಯದ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಹಣಕಾಸು ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು  ನಿಯಮದ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

Advertisment

Siddaramaiah (3)



ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Karnataka state government recruitment state government to appoint to 24 thousands vacant post-cm siddaramaiah
Advertisment
Advertisment
Advertisment