/newsfirstlive-kannada/media/post_attachments/wp-content/uploads/2024/02/Governor_1.jpg)
ನಾಳಿನ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ. ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ವಿಧಾನಮಂಡಲದ ವಿಶೇಷ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಆದರೇ, ಮನರೇಗಾ ಕಾಯಿದೆಯ ಬದಲಾವಣೆಯನ್ನು ವಿರೋಧಿಸುವ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿರುವುದು ರಾಜ್ಯ ಸರ್ಕಾರಕ್ಕೆ ಹೊಸ ತಲೆ ನೋವಾಗಿದೆ. ಕರ್ನಾಟಕದಲ್ಲೂ ಈಗ ರಾಜ್ಯಪಾಲರು ವರ್ಸಸ್ ರಾಜ್ಯ ಸರ್ಕಾರ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ನೆರೆಯ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲೂ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ನಡೆಯುತ್ತಲೇ ಇದೆ.
ಈ ಹಿಂದೆ ಎಚ್.ಆರ್.ಭಾರಧ್ವಾಜ್ ರಾಜ್ಯಪಾಲರಾಗಿದ್ದಾಗಲೂ ರಾಜ್ಯಪಾಲರು ಹಾಗೂ ಬಿಜೆಪಿ ರಾಜ್ಯ ಸರ್ಕಾರದ ನಡುವೆ ಸಂಘರ್ಷ ನಡೆಯುತ್ತಿತ್ತು. ಈಗ ಮತ್ತೆ ಅದು ಪುನಾರಾವರ್ತನೆಯಾಗುತ್ತಿದೆ. ಕೇಂದ್ರದ ಕಾಯಿದೆ ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳುವ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಹೀಗಾಗಿ ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಮಾನ್ಯ ರಾಜ್ಯ ಪಾಲರು ನಿರಾಕರಣೆ ಹಿನ್ನೆಲೆಯಲ್ಲಿ ಕಾನೂನು ಸಚಿವರ ನೇತೃತ್ವದ ಉನ್ನತಮಟ್ಟದ ನಿಯೋಗ ಇಂದು ಸಂಜೆ 5.45 ಗಂಟೆಗೆ ರಾಜಭವನಕ್ಕೆ ತೆರಳಲಿದೆ.
ರಾಜ್ಯಪಾಲರನ್ನು ಮನವೊಲಿಸುವ ಕೆಲಸವನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ತಂಡ ಮಾಡಲಿದೆ. ಈ ಪ್ರಯತ್ನ ಫಲ ನೀಡಲಿದೆಯೇ ಎಂದು ಈಗ ಕಾದು ನೋಡಬೇಕು.
ರಾಜ್ಯಪಾಲರ ಭೇಟಿಗೆ ಸ್ಪೀಕರ್ ಯು.ಟಿ. ಖಾದರ್ ಕೂಡ ಹೊರಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us