ಜೂನ್ ಅಂತ್ಯದೊಳಗೆ ಜಿ.ಪಂ, ತಾ.ಪಂ ಎಲೆಕ್ಷನ್ ಫಿಕ್ಸ್! ಸ್ಥಳೀಯ ಚುನಾವಣೆ ಬಗ್ಗೆ CM ಮಹತ್ವದ ಘೋಷಣೆ

ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ಸುಳಿವು ನೀಡಿದ್ದು, ಚುನಾವಣಾ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.

author-image
Ganesh Kerekuli
siddaramaiah (23)
Advertisment

ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ (ZP), ತಾಲೂಕು ಪಂಚಾಯತ್ (TP) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಈ ಬಗ್ಗೆ ಮಹತ್ವದ ಸುಳಿವು ನೀಡಿದ್ದು, ಚುನಾವಣಾ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ.
ಉತ್ತರ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಚುನಾವಣೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಜೂನ್ ಅಂತ್ಯದೊಳಗೆ ಎಲೆಕ್ಷನ್

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಈ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿದ್ದು, ಬರುವ ಜೂನ್ ತಿಂಗಳ ಅಂತ್ಯದೊಳಗೆ (End of June) ಚುನಾವಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಳಂಬಕ್ಕೆ ಕಾರಣವೇನು?

ಮೀಸಲಾತಿ (Reservation) ಪಟ್ಟಿ ಗೊಂದಲ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ವಿಷಯಗಳು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಚುನಾವಣೆ ವಿಳಂಬವಾಗಿತ್ತು. ಆದರೆ ಇದೀಗ ಅಡೆತಡೆಗಳು ನಿವಾರಣೆಯಾಗುವ ಹಂತದಲ್ಲಿದ್ದು, ಸರ್ಕಾರ ಚುನಾವಣೆ ನಡೆಸಲು ಮುಂದಾಗಿದೆ. "ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ನಡೆಯುತ್ತಿದೆ, ಅದು ಮುಗಿಯುತ್ತಿದ್ದಂತೆಯೇ ಚುನಾವಣೆ ಘೋಷಣೆಯಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಗ್ರಾಮ ಮಟ್ಟದ ರಾಜಕಾರಣದಲ್ಲಿ ಸಕ್ರಿಯರಾಗಿರುವ ನಾಯಕರು ಕಳೆದ 2-3 ವರ್ಷಗಳಿಂದ ಚುನಾವಣೆ ಇಲ್ಲದೆ ಅಧಿಕಾರದಿಂದ ದೂರ ಉಳಿದಿದ್ದರು. ಇದೀಗ ಸಿಎಂ ಅವರೇ ಗಡುವು ನೀಡಿರುವುದರಿಂದ, ರಾಜ್ಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೇರುವ ಸಾಧ್ಯತೆಯಿದೆ. ಜಿಬಿಎ ಚುನಾವಣೆ ಬಗ್ಗೆಯೂ ಶೀಘ್ರದಲ್ಲೇ ಸ್ಪಷ್ಟ ಚಿತ್ರಣ ಸಿಗುವ ನಿರೀಕ್ಷೆಯಿದೆ.

ಇದನ್ನೂ ಓದಿ:ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್..? ಮಹತ್ವದ ಸುಳಿವು ಕೊಟ್ಟ ಸಿದ್ದರಾಮಯ್ಯ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Local Body Election CM SIDDARAMAIAH
Advertisment