ಹಾಸನ: ಟ್ರಕ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಲು ಆಗ್ರಹ

ಹಾಸನ ಜಿಲ್ಲೆಯಲ್ಲಿ ಟ್ರಕ್ ಹರಿದು ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪರಿಹಾರ ಮೊತ್ತವನ್ನು 25 ಲಕ್ಷ ರೂ.ಗೆ ಹೆಚ್ಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

author-image
Chandramohan
HSN_GANESHA

ಅಪಘಾತದ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ

Advertisment
  • ಅಪಘಾತದ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ
  • ಕೇಂದ್ರ, ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
  • ಕೇಂದ್ರದಿಂದ 2 ಲಕ್ಷ ರೂ, ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ
  • ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಲು ಆಗ್ರಹ

ಹಾಸನದಲ್ಲಿ ಟ್ರಕ್ ಅಪಘಾತದಲ್ಲಿ ಮೃತರಾದವರ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.  ಇನ್ನೂ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲ ಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. 
ಆದರೇ, ರಾಜ್ಯ ಸರ್ಕಾರವು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದು ಸೂಕ್ತವಾಗಿಲ್ಲ. ಮೃತರಲ್ಲಿ ಹೆಚ್ಚಿನವರು  ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು.  ಎಲ್ಲರೂ ಬಡ ಕುಟುಂಬದಿಂದ ಬಂದವರು, ಮೃತರ ಕುಟುಂಬಗಳು ಈ ಮಕ್ಕಳನ್ನೇ ಅವಲಂಬಿಸಿದ್ದರು.  ಹೀಗಾಗಿ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ. 




 ಹಾಸನದಲ್ಲಿ ನಿನ್ನೆ ಗಣೇಶ ಮೆರವಣಿಗೆ ವೇಳೆ ನಡೆದ ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.  ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಹೃದಯ ಮೃತರ ಕುಟುಂಬಗಳೊಂದಿಗೆ ಇದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು.  ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಮೋದಿ ಪೋಸ್ಟ್ ಮಾಡಿದ್ದಾರೆ. 



ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭೇಟಿ, ಮೃತರ ಕುಟುಂಬಕ್ಕೆ ಸಾಂತ್ವನ

ಹಾಸನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ. ನೀಡಿದ್ದಾರೆ  . ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಗಾಯಾಳುಗಳು ಆರೋಗ್ಯವನ್ನು  ದೇವೇಗೌಡರು ವಿಚಾರಿಸಿದ್ದಾರೆ.  ಮೃತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೈಗೌಡ ಭೇಟಿ ನೀಡಿದ್ದಾರೆ.  ಮೃತರ ಮನೆಗೆ ಭೇಟಿ ಕೊಟ್ಟ ಶಾಸಕ ಹೆಚ್.ಡಿ ರೇವಣ್ಣ ಸಾಂತ್ವನ ಹೇಳಿದ್ದಾರೆ. 
ಹಾಸನದ ಜಿಲ್ಲಾಸ್ಪತ್ರೆಗೆ MLC ಸಿ ಟಿ ರವಿ ಭೇಟಿ ನೀಡಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿ ಟಿ ರವಿ, ಗಾಯಾಳುಗಳಿಂದ ಅವಘಡಕ್ಕೆ ಕಾರಣವಾದ ಅಂಶಗಳ  ಬಗ್ಗೆ ಮಾಹಿತಿ ಪಡೆದಿದ್ದಾರೆ. 
ಜಿಲ್ಲಾಸ್ಪತ್ರೆಯಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ದಾರೆ.  ಮೃತರ ಕುಟುಂಬಗಳಿಗೆ ಸರ್ಕಾರದ ಪರವಾಗಿ  ಸಾಂತ್ವನ ಹೇಳಿದ್ದೇನೆ. ಕಣ್ಮುಂದೆಯೇ ಪ್ರಾಣ ಕಳೆದುಕೊಳ್ಳುವುದು ನೋಡುವುದೇ ಕಷ್ಟ. ಆ ಕುಟುಂಬದ ಸಾವು-ನೋವು ಅರ್ಥ ಮಾಡಿಕೊಳ್ಳೋದು ಕಷ್ಟ. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಸ್ಥಳ ಪರಿಶೀಲನೆ ಕೂಡ ಮಾಡಿದ್ದೇನೆ. ಕೆಲವು ಕುಟುಂಬಗಳ ಭೇಟಿ ಮಾಡಿ ಸಾಂತ್ವನ  ಹೇಳಿದ್ದೇನೆ. ಗಾಯಾಳುಗಳ ಆರೈಕೆ ಬಗ್ಗೆಯೂ ವಿಚಾರಿಸಿದ್ದೇನೆ. ಪೊಲೀಸರಿಗೂ ಹೇಳಿದ್ದೇನೆ. ಅಪಘಾತ ಹೇಗಾಯ್ತು ಎಂಬ ಬಗ್ಗೆ ತನಿಖೆ ಆಗಬೇಕು. ಅಪಘಾತ ಆಗುತ್ತೆ, ಆದರೆ, ಜನಸಂದಣಿ ಜಾಗದಲ್ಲಿ ಆಗಿ ಸಾವು-ನೋವು ಸಂಭವಿಸಿವೆ. ಡ್ರೈವರ್ ಬಗ್ಗೆಯೂ ತನಿಖೆ ಮಾಡುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಗಳಿಗೆ ನಷ್ಟ ಭರಿಸಲು ಆಗಲ್ಲ, ಸ್ವಲ್ಪ ಸಹಾಯದ ರೀತಿಯಲ್ಲಿ ಪರಿಹಾರ ನೀಡಿದ್ದೇವೆ. ಬೇರೆ ಏನೇ ಕೆಲಸ ಇದ್ರು ಖುದ್ದು ನೋಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Hassan Ganesh Procession Tragedy
Advertisment