/newsfirstlive-kannada/media/media_files/2025/12/09/menustrual-leave-stay-by-hc-2025-12-09-13-02-27.jpg)
ಕರ್ನಾಟಕದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಕರ್ನಾಟಕದಲ್ಲಿ ವೃತ್ತಿನಿರತ ಮಹಿಳೆಯರಿಗೆ ತಿಂಗಳಿಗೊಂದು ಋತುಚಕ್ರ ರಜೆ ನೀಡಿ ರಾಜ್ಯ ಕ್ಯಾಬಿನೆಟ್ ತೀರ್ಮಾನ ತೆಗೆದುಕೊಂಡಿತ್ತು. ಬಳಿಕ ಅಧಿಕೃ ಆದೇಶವನ್ನು ಹೊರಡಿಸಲಾಗಿತ್ತು. ಸರ್ಕಾರಿ ಮಹಿಳಾ ನೌಕರರು, ಖಾಸಗಿ ವಲಯದ ಮಹಿಳಾ ನೌಕರರಿಗೆ ತಿಂಗಳಿಗೊಂದು ಕಡ್ಡಾಯ ಋತುಚಕ್ರ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದರೇ, ಇದರ ವಿರುದ್ಧ ಹೊಟೇಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಋತುಚಕ್ರ ರಜೆ ನೀಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರ ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ನೀಡುವಂತೆ ಆದೇಶ ನೀಡಿತ್ತು. ಖಾಸಗಿ ವಲಯದ ಕಂಪನಿಗಳು ಋತುಚಕ್ರ ರಜೆ ಘೋಷಣೆಗೆ ವಿರೋಧ ಮಾಡಿದ್ದವು. ಬೆಂಗಳೂರು ಹೋಟೆಲ್ ಮಾಲಿಕರ ಸಂಘದಿಂದ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಹೋಟೆಲ್ ಮಾಲಿಕರ ಸಂಘದ ಪರವಾಗಿ ವಕೀಲರಾದ ಪ್ರಶಾಂತ್ ಬಿ.ಕೆ. ಅವರು ಹೈಕೋರ್ಟ್ ವಾದ ಮಂಡನೆ ಮಾಡಿದ್ದರು.
ಋತುಚಕ್ರ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ನೀಡುವುದಕ್ಕೆ ತಡೆಯಾಜ್ಞೆ ಸಿಕ್ಕಿರುವುದು ಸಂತಸದ ವಿಚಾರ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ. ಸಿ. ರಾವ್ ನ್ಯೂಸ್ ಫಸ್ಟ್ ಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಸರ್ಕಾರಿ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ವೇತನಸಹಿತ ರಜೆ ನೀಡುವಂತೆ ಆದೇಶ ಮಾಡಲಾಗಿತ್ತು .
/filters:format(webp)/newsfirstlive-kannada/media/media_files/2025/12/09/menustrual-leave-stay-by-hc-1-2025-12-09-13-05-11.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us