/newsfirstlive-kannada/media/media_files/2025/09/16/high-court-of-karnataka-2025-09-16-15-16-25.jpg)
ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೇ, ಸಮೀಕ್ಷೆ ನಡೆಸುವ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೆಲವೊಂದು ಷರತ್ತು ವಿಧಿಸಿ ಸಮೀಕ್ಷೆ ಮುಂದುವರಿಸಲು ಅವಕಾಶ ನೀಡಿದೆ. ಈ ಬಗ್ಗೆ ಮಧ್ಯಂತರ ಆದೇಶ ನೀಡಿದೆ.
ಇದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ರಾಜ್ಯ ಸರ್ಕಾರಕ್ಕೆ ಸಿಕ್ಕ ರೀಲೀಫ್ ಆಗಿದೆ. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಹೈಕೋರ್ಟ್ ಸಿಜೆ ವಿಭು ಭಕ್ರು ಅವರ ಪೀಠದಲ್ಲಿ ಕಳೆದ ಮೂರು ದಿನದಿಂದ ವಾದ-ಪ್ರತಿವಾದ ನಡೆದಿತ್ತು.
ಅಂತಿಮವಾಗಿ ಈಗ ಹೈಕೋರ್ಟ್ ಸಮೀಕ್ಷೆಯನ್ನು ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ರಾಜ್ಯ ಒಕ್ಕಲಿಗರ ಸಂಘ, ಬ್ರಾಹ್ಮಣ ಮಹಾಸಭಾ ಹೈಕೋರ್ಟ್ ಗೆ ಮನವಿ ಮಾಡಿದ್ದವು. ಆದರೇ, ಹೈಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ. ಹೀಗಾಗಿ ಸಮೀಕ್ಷೆ ಮುಂದುವರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಹೈಕೋರ್ಟ್ ವಿಧಿಸಿದ ಷರತ್ತುಗಳೇನು ಗೊತ್ತಾ?
ಸಮೀಕ್ಷೆ ವೇಳೆ ಸಂಗ್ರಹಿಸುವ ಜನರ ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು
ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು.
ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು.
ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು
ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು.
ಆಯೋಗ ಹೊರತುಪಡಿಸಿ ಬೇರೆ ಯಾರಿಗೂ ದತ್ತಾಂಶ ಸಿಗುವಂತಿಲ್ಲ.
ಇನ್ನೂ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 2ನೇ ವಾರಕ್ಕೆ ಮುಂದೂಡಿದೆ. ದತ್ತಾಂಶದ ಗೌಪ್ಯತೆಯ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.