/newsfirstlive-kannada/media/media_files/2025/09/11/state-cabinet-meeting-2025-09-11-20-18-45.jpg)
ಸಿಎಂ ನಿವಾಸದಲ್ಲಿ ಭೋಜನಕೂಟ ಆರಂಭ
ಸಿಎಂ ಸಿದ್ದರಾಮಯ್ಯ ಇಂದು ತಮ್ಮ ನಿವಾಸದಲ್ಲಿ ತಮ್ಮ ಕ್ಯಾಬಿನೆಟ್‌ನ ಸಹೋದ್ಯೋಗಿಗಳಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲೇ ಭೋಜನಕೂಟ ಏರ್ಪಡಿಸಿದ್ದಾರೆ. ಕಾವೇರಿ ನಿವಾಸಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ , ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಿದ್ದಾರೆ.
ಇನ್ನೂ ಉಳಿದ ಸಚಿವರು ಕೂಡ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸ
ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷದ ಬಳಿಕ ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದಾರೆ. ಇದು ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗುತ್ತಾ ಎಂಬ ಕುತೂಹಲಕ್ಕೂ ಕಾರಣವಾಗಿದೆ. ಕ್ಯಾಬಿನೆಟ್ ನಲ್ಲಿರುವ ಕೆಲ ನಿಷ್ಕ್ರಿಯ ಸಚಿವರನ್ನು ಕೈ ಬಿಟ್ಟು ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆಯಾ ಜಾತಿಗಳಿಂದಲೇ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆಯಂತೆ. ಹೀಗಾಗಿ ಈ ವಿಷಯವನ್ನು ಎಲ್ಲ ಸಚಿವರಿಗೂ ಮನವರಿಕೆ ಮಾಡಿಕೊಡಲು ಭೋಜನಕೂಟ ಕರೆದಿದ್ದಾರೆ ಎಂಬ ಚರ್ಚೆಯೂ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.