/newsfirstlive-kannada/media/media_files/2025/08/01/prajwal-revanna-crying-2025-08-01-14-05-21.jpg)
ಪ್ರಜ್ವಲ್ ರೇವಣ್ಣ
ಅ*ತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿದೆ.
ಅ*ತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯವು ತೀರ್ಪು ನೀಡಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸುತ್ತಿದ್ದಂತೆಯೇ, ಮಾಜಿ ಸಂಸದ ಕೋರ್ಟ್ ಹಾಲ್​​ನಲ್ಲಿಯೇ ಕಣ್ಣೀರು ಇಟ್ಟಿದ್ದಾರೆ.
ಇದನ್ನೂ ಓದಿ: ಅತ್ಯಾ*ಚಾರ ಕೇಸ್​​ನಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ -ಮಹತ್ವದ ತೀರ್ಪು
ಕಣ್ಣೀರು ಇಟ್ಟ ಪ್ರಜ್ವಲ್​ ರೇವಣ್ಣ ಬೇಸರದಲ್ಲೇ ಪೊಲೀಸ್ ವಾಹನ ಹತ್ತಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಮನೆ ಕೆಲಸದಾಕೆ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ಇನ್ನೂ ಮೂರು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಇವತ್ತು ಒಟ್ಟು 424 ಪುಟಗಳ ತೀರ್ಪುನ್ನು ಪ್ರಕಟಿಸಿದೆ.
ಇನ್ನು ನಾಳೆ ಶಿಕ್ಷೆಯ ಪ್ರಮಾಣದ ಬಗ್ಗೆ​​ ವಾದ- ಪ್ರತಿವಾದವನ್ನ ಕೋರ್ಟ್ ಆಲಿಸಲಿದೆ. ಗರಿಷ್ಠ ಶಿಕ್ಷೆ ವಿಧಿಸಬೇಕು ಅಂತ ಪ್ರಾಸಿಕ್ಯೂಷನ್ ಪರ ವಕೀಲರ ವಾದ ಮಂಡಿಸುವ ಸಾಧ್ಯತೆ ಇದೆ. ಕಡಿಮೆ ಶಿಕ್ಷೆ ನೀಡಿ ಅಂತ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡುವ ಸಾಧ್ಯತೆಯೂ ಇದೆ.
ಇದನ್ನೂ ಓದಿ: ಜನರ ಕಷ್ಟ-ಕಾರ್ಪಣ್ಯಕ್ಕೆ ವಿನೂತನ ಮುನ್ನುಡಿ ಬರೆದ ದರ್ಶನ್ ಪುಟ್ಟಣ್ಣಯ್ಯ.. ಏನದು..?
/filters:format(webp)/newsfirstlive-kannada/media/post_attachments/wp-content/uploads/2024/04/Prajwal-Revanna-1-1.jpg)
ಎಷ್ಟು ವರ್ಷ ಶಿಕ್ಷೆಗೆ ಅವಕಾಶ ಇದೆ..?
ಬಿಎನ್​ಎಸ್​ 376(2) (k), 376 (2) (n), 354 (a) (b) (c), 506 ಮತ್ತು 201, IT ACT 66(E) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 376(2) (k) ಮತ್ತು 376 (2) (n) ಕನಿಷ್ಟ 10 ವರ್ಷ - ಗರಿಷ್ಠ ಜೀವಾವಧಿ ವಿಧಿಸುವ ಅವಕಾಶ ಇದೆ. ಅದೇ ರೀತಿ 354 (a) (b) (c) ಅಡಿಯಲ್ಲಿ 3 ವರ್ಷ ಶಿಕ್ಷೆ ವಿಧಿಸಬಹುದಾಗಿದೆ. ಅಲ್ಲದೇ ಸೆಕ್ಷನ್ 506 ಅಡಿಯಲ್ಲಿ 6 ತಿಂಗಳು, 201 ಬಿಎನ್​ಎಸ್​ ಅಡಿಯಲ್ಲಿ ಕನಿಷ್ಠ 1 ವರ್ಷದಿಂದ 7 ವರ್ಷ ಶಿಕ್ಷೆ ನೀಡಬಹುದು. ಹಾಗೆಯೇ ಸೆಕ್ಷನ್ 66(E) of ಐಟಿ ಆ್ಯಕ್ಟ್ 2008 ಅಡಿಯಲ್ಲಿ 3 ವರ್ಷ ಶಿಕ್ಷೆ ವಿಧಿಸುವ ಅವಕಾಶಗಳಿವೆ. ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್​ ಏನು ಶಿಕ್ಷೆ ನೀಡಲಿದೆ ಅನ್ನೋದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us