/newsfirstlive-kannada/media/media_files/2025/08/19/cm-siddaramaiah-2025-08-19-23-01-13.jpg)
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಲು, ಅಂತವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ರಚಿಸಲು ತೀರ್ಮಾನಿಸಲಾಗಿದೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ಮಂಡಿಸಲು ಅನುಮೋದನೆ ನೀಡಲಾಗಿದೆ.
ಇದನ್ನೂ ಓದಿ:ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಸುಜಾತ, ಅನನ್ಯಾ ಭಟ್ ಕುಟುಂಬದ ಬಗ್ಗೆ ಎಸ್‌ಐಟಿ ತನಿಖೆ, ಸಿಕ್ಕ ಮಾಹಿತಿ ಏನು ಗೊತ್ತಾ?
ಅಕ್ರಮ ಗಣಿಗಾರಿಕೆ ಪ್ರಕರಣಗಳ ತ್ವರಿತ ಇತ್ಯರ್ಥ ಮಾಡುವ ಬಗ್ಗೆ ಕಾನೂನು ಸಚಿವ ಎಚ್.ಕೆ ಪಾಟೀಲ್ ಸಿಎಂ ಸಿದ್ದರಾಯ್ಯನವರಿಗೆ ಪತ್ರ ಬರೆದಿದ್ದರು. ಪತ್ರದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್.ಕೆ ಪಾಟೀಲ್ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿತ್ತು.
ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ಕೆಲವು ಶಿಫಾರಸು ಜಾರಿಗೊಳಿಸಲು ವರದಿ ನೀಡಿತ್ತು. ಇದರ ಬೆನ್ನಲ್ಲೇ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ರಚನೆಯಾಗಲಿದೆ. ಜೊತೆಗೆ ಅಕ್ರಮ ಗಣಿಗಾರಿಕೆ ಪ್ರಕರಣಗಳ ಇತ್ಯರ್ಥಕ್ಕೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಾಡಲು ತೀರ್ಮಾನಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ