/newsfirstlive-kannada/media/media_files/2025/08/25/state-government-appointment02-2025-08-25-17-54-20.jpg)
ಸೆಪ್ಟಂಬರ್ 4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಬೇಕು.
ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಸೂಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇದರಿಂದಾಗಿ ವಿವಿಧ ಇಲಾಖೆಗಳು ತಮ್ಮ ಇಲಾಖಾ ನೇಮಕಾತಿಯನ್ನು ಚುರುಕುಗೊಳಿಸಲಿವೆ. ರಾಜ್ಯದಲ್ಲಿ 2.76 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 80 ಸಾವಿರ ಹುದ್ದೆಗಳನ್ನು ವಿವಿಧ ಇಲಾಖೆಗಳು ಭರ್ತಿ ಮಾಡಿಕೊಳ್ಳಲಿವೆ. ಈಗಾಗಲೇ ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಆಯಾ ಇಲಾಖೆಗಳು ಈಗ ದಲಿತ ಒಳ ಮೀಸಲಾತಿ ಅಳವಡಿಸಿಕೊಂಡು ಮುಂದುವರಿಸಲಿವೆ. ಇದರಿಂದ ರಾಜ್ಯದ ನಿರುದ್ಯೋಗಿ ಯುವಜನತೆಗೆ ಉದ್ಯೋಗ ಸಿಗುವ ಭರವಸೆ ಮೂಡಿದೆ.
ಇದನ್ನೂ ಓದಿ:ಸೇನೆಗೆ ಸೇರಬೇಕು ಎನ್ನುವರಿಗೆ ಸುವರ್ಣಾವಕಾಶ.. ಸರ್ಕಾರದಿಂದ ಉಚಿತ ತರಬೇತಿ, ಅಪ್ಲೇ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ