ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾಸಭಾದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

author-image
Chandramohan
eshwar khandre elected as lingayat mahasabha prez

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

Advertisment
  • ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ
  • ಮಹಾಸಭಾದ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆ
  • ಹಾಲಿ ಪರಿಸರ, ಅರಣ್ಯ ಖಾತೆ ಸಚಿವರಾಗಿರುವ ಈಶ್ವರ್ ಖಂಡ್ರೆ


ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ.  24 ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವಿರೋಧ ಆಯ್ಕೆಯಾಗಿದ್ದಾರೆ. ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ. ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು.   ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ  ಶಾಮನೂರು ಶಿವಶಂಕರಪ್ಪ ನಿಧನವಾಗುವವರೆಗೂ ಅಧ್ಯಕ್ಷರಾಗಿದ್ದರು.  ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಕೂಡ ಹೇಳಿದ್ದರು.  ಆದರೇ, ಈಗ ಕೊನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಭಾಲ್ಕಿ  ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ  ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. 

akhila bharat veerashiva mahasabha




ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Veerashaiva Lingayat Eshwar Khandre Eshwara Khandre Akhila Bharata Veerashaiva Mahasabha
Advertisment