Advertisment

Karnataka Budget 2026 Live Updates: ಒಟ್ಟು ಬಜೆಟ್ ಗಾತ್ರ 448004 ಕೋಟಿ ರೂಪಾಯಿ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಭಾಷಣ ಆರಂಭವಾಗಿದೆ. ಹಣಕಾಸು ಸಚಿವರಾಗಿ ಇದು ಅವರ 17ನೇ ಬಜೆಟ್ ಆಗಿದ್ದು, ಸಿಎಂ ಆಗಿ 10ನೇ ಬಾರಿ ಆಯವ್ಯಯ ಮಂಡಿಸುತ್ತಿದ್ದಾರೆ. ಇಡೀ ರಾಜ್ಯದ ಕಣ್ಣು ಈಗ ವಿಧಾನಸೌಧದತ್ತ ನೆಟ್ಟಿದೆ.

author-image
Ganesh Kerekuli
Updated On
New Update
siddaramaiah budget
Advertisment

ರಾಜ್ಯ ರಾಜಕಾರಣದಲ್ಲಿ ಆಯವ್ಯಯ ಮಂಡನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಹೊರೆ ಹಾಗೂ ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯ ನಡುವೆ ಮಂಡನೆಯಾಗುತ್ತಿರುವ ಬಜೆಟ್‌ ಇದಾಗಿದೆ. ಬಜೆಟ್​ಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ನಿಮಗೆ ಇಲ್ಲಿ ಸಿಗಲಿದೆ.

Advertisment
  • Mar 06, 2026 10:35 IST

    ಯಾವ ವಲಯಕ್ಕೆ ಎಷ್ಟು ಅನುದಾನ?

    • ಶಿಕ್ಷಣ: 47,224 ಕೋಟಿ ರೂ. (10%)
    • ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ. (7%)
    • ಇಂಧನ: 29,947 ಕೋಟಿ ರೂ. (6%)
    • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ. (6%)
    • ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ. (5%)
    • ನೀರಾವರಿ: 22,436 ಕೋಟಿ ರೂ. (5%)
    • ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ. (5%)
    • ಕಂದಾಯ: 19,843 ಕೋಟಿ ರೂ. (4%)
    • ಸಮಾಜ ಕಲ್ಯಾಣ: 18,612 ಕೋಟಿ ರೂ. (4%)
    • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ. (4%)
    • ಒಳಾಡಳಿತ (ಗೃಹ): 11,424 ಕೋಟಿ ರೂ. (2%)
    • ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ. (2%)
    • ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ. (2%)
    • ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ. (1%)
    • ಇತರೆ ವಲಯಗಳು: 1,72,757 ಕೋಟಿ ರೂ. (37%)
    • ಬಂಡವಾಳ ಲೆಕ್ಕಾಚಾರ: ಸಾಲ ಮತ್ತು ವೆಚ್ಚದ ವಿವರ
    • ಸರ್ಕಾರದ ಬಂಡವಾಳ ಲೆಕ್ಕದ (Capital Account) ಅಂಕಿ-ಅಂಶಗಳ ಪ್ರಕಾರ:



  • Mar 06, 2026 10:35 IST

    4.48 ಲಕ್ಷ ಕೋಟಿ ರೂ. ಗಾತ್ರದ ಬೃಹತ್ ಬಜೆಟ್! ಶಿಕ್ಷಣ, ಮಹಿಳಾ ಕಲ್ಯಾಣಕ್ಕೆ ಸಿಂಹಪಾಲು, ಯಾವ ಇಲಾಖೆಗೆ ಎಷ್ಟು ಅನುದಾನ?

    ರಾಜ್ಯ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ ಆಯವ್ಯಯ (ಬಜೆಟ್) ಮಂಡನೆಯಾಗಿದ್ದು, ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ (ಸಂಚಿತ ನಿಧಿ) ಬರೋಬ್ಬರಿ 4,48,004 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರದಲ್ಲಿ ಗಣನೀಯ ಏರಿಕೆಯಾಗಿದೆ.



  • Mar 06, 2026 10:26 IST

    ಒಟ್ಟು ಬಜೆಟ್ ಗಾತ್ರ 448004 ಲಕ್ಷ ಕೋಟಿ

     2025-2026ನೇ ಸಾಲಿನ ಕರ್ನಾಟಕ ಬಜೆಟ್​ನ ಒಟ್ಟು ಗಾತ್ರ 448004 ಲಕ್ಷ ಕೋಟಿ ರೂಪಾಯಿ ಆಗಿದೆ. 



  • Mar 06, 2026 10:22 IST

    2026-27ನೇ ಸಾಲಿನ ಬಜೆಟ್ ಮಂಡನೆ ಆರಂಭ- ಸಿದ್ದರಾಮಯ್ಯ ಹೊಸ ದಾಖಲೆ

    ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಅವರು ಸತತ 17ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. 



  • Mar 06, 2026 10:07 IST

    ಬಜೆಟ್ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ

    2026-27ನೇ ಸಾಲಿನ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ಇಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. 



  • Mar 06, 2026 09:59 IST

    ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

    ಸಿಎಂ ಸಿದ್ದರಾಮಯ್ಯ ಮಂಡಿಸುವ 2026–27ನೇ ಸಾಲಿನ ಬಜೆಟ್ ವೀಕ್ಷಣೆಗೆ ಸಖತ್ ಪ್ಲಾನ್ ಮಾಡಲಾಗಿದೆ. ಆಯ್ದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರಪ್ರಸಾರ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಾದ್ಯಂತ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಡಿಜಿಟಲ್ ಡಿಸ್ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವಾಗಲಿದೆ. ಬಜೆಟ್ ಮಂಡನೆ ಬಳಿಕ ನಡೆಯುವ ಸಿಎಂ ಪತ್ರಿಕಾಗೋಷ್ಠಿಯೂ ಪರದೆಗಳ ಮೂಲಕ ನೇರ ಪ್ರಸಾರವಾಗಲಿದೆ. 



  • Mar 06, 2026 09:54 IST

    ಶಿಕ್ಷಣ, ಕೃಷಿ, ಸಾರಿಗೆ ಕ್ಷೇತ್ರದಲ್ಲಿನ ಡಿಮ್ಯಾಂಡ್ ಏನೇನು?

    2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳು ಮಂಡಿಸಲಿರುವ ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ.

    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಸಿದ್ದು ಲೆಕ್ಕದ ಮೇಲೆ ಬೆಟ್ಟದಷ್ಟು ನಿರೀಕ್ಷೆ.. ಶಿಕ್ಷಣ, ಕೃಷಿ, ಸಾರಿಗೆ ಕ್ಷೇತ್ರದಲ್ಲಿನ ಡಿಮ್ಯಾಂಡ್ ಏನೇನು?



  • Mar 06, 2026 09:53 IST

    ಗುಡ್​ನ್ಯೂಸ್​ ನಿರೀಕ್ಷೆಯಲ್ಲಿ ರಾಜ್ಯದ ಜನ

    ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ಇವತ್ತು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆಯ 17ನೇ ಆಯವ್ಯಯ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಕಳೆದ ಬಾರಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದ ಸರ್ಕಾರ, ಈ ಬಾರಿ ಗ್ಯಾರಂಟಿ ಜೊತೆಗೆ ದೀರ್ಘಕಾಲೀನ ಜನಪರ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.

    ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್‌ ಮಂಡನೆಗೆ ಕ್ಷಣಗಣನೆ- ಗುಡ್​ನ್ಯೂಸ್​ ನಿರೀಕ್ಷೆಯಲ್ಲಿ ರಾಜ್ಯದ ಜನ..!



  • Mar 06, 2026 09:52 IST

    ದೇಶದ ದಾಖಲೆ ಮುರಿಯಲು ಇನ್ನೊಂದು ಹೆಜ್ಜೆ ಬಾಕಿ!

    ರಾಜ್ಯದ ಮಟ್ಟಿಗೆ ಸಿದ್ದರಾಮಯ್ಯ ಅತಿ ಹೆಚ್ಚು ಬಜೆಟ್ ಮಂಡಿಸಿ ನಂಬರ್ 1 ಸ್ಥಾನದಲ್ಲಿದ್ದಾರೆ. ಆದರೆ, ರಾಷ್ಟ್ರಮಟ್ಟದಲ್ಲಿ ಗಮನಿಸಿದರೆ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಗುಜರಾತ್‌ನ ಮಾಜಿ ಹಣಕಾಸು ಸಚಿವ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ಅವರ ಹೆಸರಿನಲ್ಲಿದೆ.

    ವಜುಭಾಯಿ ವಾಲಾ ಅವರು ಒಟ್ಟು 18 ಬಾರಿ ಬಜೆಟ್ ಮಂಡಿಸಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಸಿದ್ದರಾಮಯ್ಯ ಅವರು 17ನೇ ಬಜೆಟ್ ಮಂಡಿಸುತ್ತಿದ್ದು, ವಜುಭಾಯಿ ವಾಲಾ ಅವರ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಲು ಅಥವಾ ಬ್ರೇಕ್ ಮಾಡಲು ಸಿದ್ದರಾಮಯ್ಯ ಅವರಿಗೆ ಇನ್ನೊಂದು ಬಜೆಟ್ ಬಾಕಿ ಇದೆ.

    ಒಟ್ಟಿನಲ್ಲಿ ಆರ್ಥಿಕ ತಜ್ಞರಾಗಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಈ ಬಾರಿಯ ಬಜೆಟ್‌ನಲ್ಲಿ ಯಾವೆಲ್ಲಾ ಹೊಸ ಘೋಷಣೆಗಳಿರಲಿವೆ? ಜನಸಾಮಾನ್ಯರಿಗೆ ಏನೆಲ್ಲಾ ಕೊಡುಗೆ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.



  • Mar 06, 2026 09:51 IST

    ದಾಖಲೆಯ ಪುಟಕ್ಕೆ ಸಿದ್ದರಾಮಯ್ಯ: ಮಾಜಿ ಸಿಎಂ ಹೆಗಡೆ ದಾಖಲೆ ಬ್ರೇಕ್

    ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಇದಾಗಿದೆ. ಹಾಗೆಯೇ, ಮುಖ್ಯಮಂತ್ರಿಯಾಗಿ ಇದು ಅವರ 10ನೇ ಆಯವ್ಯಯ ಮಂಡನೆಯಾಗಿದೆ. ಈ ಮೂಲಕ ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ವಿತ್ತ ಸಚಿವ ಎಂಬ ಅಜೇಯ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.

    ಈ ಹಿಂದೆ ಮಾಜಿ ಸಿಎಂ ದಿವಂಗತ ರಾಮಕೃಷ್ಣ ಹೆಗಡೆ ಅವರು 14 ಬಾರಿ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದರು. ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರು ಈಗಾಗಲೇ ಹಿಂದಿಕ್ಕಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಹಣಕಾಸು ಖಾತೆಯನ್ನು ಸುದೀರ್ಘವಾಗಿ ನಿಭಾಯಿಸಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.

    ಹೆಚ್ಚಿನ ಮಾಹಿತಿಗಾಗಿ: ದೇಶದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ನಾಯಕರ ಪಟ್ಟಿ: ನಂ.1 ಸ್ಥಾನದಲ್ಲಿ ವಜುಭಾಯಿ ವಾಲಾ, ಸಿಎಂ ಸಿದ್ದುಗೆ ಎಷ್ಟನೇ ಸ್ಥಾನ?



  • Mar 06, 2026 09:50 IST

    ಇಂದಿನ ಬಜೆಟ್ ಕಲಾಪದ ವೇಳಾಪಟ್ಟಿ ಹೀಗಿದೆ:

    • ಬೆಳಗ್ಗೆ 9.45ಕ್ಕೆ: ಸಚಿವ ಸಂಪುಟ ಸಭೆ ನಡೆಯಲಿದ್ದು, ಬಜೆಟ್‌ಗೆ ಔಪಚಾರಿಕವಾಗಿ ಅನುಮೋದನೆ ಪಡೆಯಲಾಗುವುದು.
    • ಬೆಳಗ್ಗೆ 10.15ಕ್ಕೆ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಬಜೆಟ್ ಭಾಷಣ ಆರಂಭವಾಗಲಿದೆ.
    • ಸಂಜೆ: ಬಜೆಟ್ ಮಂಡನೆ ಪೂರ್ಣಗೊಂಡ ಬಳಿಕ ಸಂಜೆ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಿ, ಆಯವ್ಯಯದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.



Siddaramaiah 17th budget Karnataka state budget Karnataka Budget 2026 budget 2026 Kitchen Budget
Advertisment
Advertisment
Advertisment