/newsfirstlive-kannada/media/media_files/2025/11/20/dks-supported-mla-delhi-tour-2025-11-20-16-50-40.jpg)
ಸಿಎಂ ಸ್ಥಾನಕ್ಕೆ ಡಿಕೆಶಿ ಬೆಂಬಲಿಸಿ ಶಾಸಕರಿಂದ ದೆಹಲಿ ಯಾತ್ರೆ!
ರಾಜ್ಯ ರಾಜಕೀಯದಲ್ಲಿ ಮಿಂಚಿನ ಸಂಚಲನವಾಗಿದೆ. ಇಷ್ಟು ದಿನಗಳ ಕಾಲ ಸೈಲೆಂಟಾಗಿದ್ದ ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಸಚಿವರು ಈಗ ಪವರ್ ಗೇಮ್ ನ ಅಖಾಡಕ್ಕೆ ಇಳಿದಿದ್ದಾರೆ. ಸಿಎಂ ಸ್ಥಾನವನ್ನು ತಮಗೆ ನೀಡುವಂತೆ ಬಿಗಿ ಪಟ್ಟು ಹಿಡಿದಿರುವ ಡಿ.ಕೆ.ಶಿವಕುಮಾರ್ ಪರವಾಗಿ ಕಾಂಗ್ರೆಸ್‌ನ ಒಕ್ಕಲಿಗ ಶಾಸಕರು, ಸಚಿವರು ಅಖಾಡಕ್ಕಿಳಿದು ಬ್ಯಾಟಿಂಗ್ ನಡೆಸಲು ಹೊರಟಿದ್ದಾರೆ . ಸಿಎಂ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಅನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು, ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯದ ಶಾಸಕರು ದೆಹಲಿ ಯಾತ್ರೆ ಹೊರಟಿದ್ದಾರೆ. ಚಲುವರಾಯಸ್ವಾಮಿ ನೇತೃತ್ವದ ಟೀಮ್‌ಗೆ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯ ದಲಿತ ಶಾಸಕರು ಬೆಂಬಲ ಸೂಚಿಸಿದ್ದಾರೆ. ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಮಾಗಡಿ ಶಾಸಕ ಬಾಲಕೃಷ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಅನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ದಾವಣಗೆರೆ ಜಿಲ್ಲೆಯ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಈಗ ಸದ್ದಿಲ್ಲದೇ ದೆಹಲಿ ಯಾತ್ರೆ ಕೈಗೊಂಡಿದ್ದಾರೆ.
ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಗೆ ನೀಡುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಮೇಲೆ ಒತ್ತಡ ಹಾಕಲು ಸಚಿವರು, ಶಾಸಕರ ದಂಡು ದೆಹಲಿಗೆ ಹೊರಟಿದೆ. ಒಕ್ಕಲಿಗ ಸಮುದಾಯದ ನಾಯಕ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡಬೇಕು. ಈ ಮೂಲಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಒಕ್ಕಲಿಗ ಸಮುದಾಯಕ್ಕೆ ನ್ಯಾಯ ನೀಡುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಮೇಲೆ ಚಲುವರಾಯಸ್ವಾಮಿ ನೇತೃತ್ವದಲ್ಲಿ ತೀವ್ರ ಒತ್ತಡ ಹೇರಲಾಗುತ್ತಿದೆ.
ಇಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಂಡಿದೆ. ಎರಡೂವರೆ ವರ್ಷ ಪೂರ್ಣಗೊಂಡ ದಿನವೇ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಬೆಳವಣಿಗೆಗಳು ಆಗುತ್ತಿವೆ. ಯಾರೂ ನಿರೀಕ್ಷಿಸದ ರೀತಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕರು ಡಿಕೆಶಿ ಪರ ಅಖಾಡಕ್ಕಿಳಿದಿರುವುದು ವಿಶೇಷ .
ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷವಾಗಿದೆ. ಹೀಗಾಗಿ ಸಿಎಂ ಸ್ಥಾನ ಈಗ ಹಂಚಿಕೆಯಾಗಬೇಕು. ಸಿಎಂ ಸ್ಥಾನವನ್ನು ಡಿಸಿಎಂ ಡಿಕೆ ಶಿವಕುಮಾರ್ ಗೆ ನೀಡಬೇಕೆಂದು ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು ಆಗ್ರಹಿಸುತ್ತಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮ್ಯಾಂಡ್ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಅವರನ್ನು ಬೆಂಬಲಿಸುತ್ತಿರುವ ಚಲುವರಾಯಸ್ವಾಮಿ ಈಗ ಒಕ್ಕಲಿಗ ಕಾರ್ಡ್ ಪ್ರಯೋಗ ಮಾಡುತ್ತಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯ ಪ್ರಬಲವಾಗಿದೆ. ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ನೀಡದಿದ್ದರೇ, ಈಗಾಗಲೇ ಜೆಡಿಎಸ್- ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ವಿಪಕ್ಷಗಳ ಈ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಮೈತ್ರಿ ಹೊಡೆತ ತಪ್ಪಿಸಲು ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮ್ಯಾಂಡ್ ನಾಯಕರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಮುಂದೆ ವಾದ ಮಂಡಿಸಲು ಸಜ್ಜಾಗಿ ದೆಹಲಿಗೆ ಹೊರಟಿದ್ದಾರೆ.
/filters:format(webp)/newsfirstlive-kannada/media/media_files/2025/11/20/dks-supported-mla-delhi-tour02-2025-11-20-16-56-48.jpg)
ಹಾಲಿ ಸಚಿವರು ಮತ್ತು ಶಾಸಕರ ಜೊತೆ ಮಂಡ್ಯ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಕೂಡ ಡಿಕೆಶಿ ಪರವಾಗಿ ದೆಹಲಿಗೆ ಪ್ರಯಾಣಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್‌ನ ಸಚಿವರು ಮತ್ತು ಶಾಸಕರ ನಿಯೋಗ ಕಾಂಗ್ರೆಸ್‌ನ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ. ಬಳಿಕ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉಳಿದ ರಾಷ್ಟ್ರೀಯ ನಾಯಕರನ್ನು ನಿಯೋಗ ಭೇಟಿಯಾಗಲಿದೆ. ಡಿ.ಕೆ.ಶಿವಕುಮಾರ್ ಪರವಾಗಿ ದೆಹಲಿಯಲ್ಲಿ ಧ್ವನಿ ಎತ್ತಲಿದ್ದಾರೆ.
/filters:format(webp)/newsfirstlive-kannada/media/post_attachments/wp-content/uploads/2025/01/Dkshivakumar-Siddaramaiah.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us