ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ವದಂತಿ..! ಇದು ನಿಜಾನಾ? ಸುಳ್ಳಾ? ಸ್ಪಷ್ಟನೆ ಇಲ್ಲಿದೆ

ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ಗಂಟೆಗಳಿಂದ ಸಂಚಲನ ಮೂಡಿಸಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವದಂತಿಗೆ ಸ್ವತಃ ಸಚಿವರೇ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರ ಕಲಾಪದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.

author-image
Ganesh Kerekuli
KJ George
Advertisment

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ಗಂಟೆಗಳಿಂದ ಸಂಚಲನ ಮೂಡಿಸಿದ್ದ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವದಂತಿಗೆ ಸ್ವತಃ ಸಚಿವರೇ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರ ಕಲಾಪದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.

ಬಿಜೆಪಿ ನಾಯಕರಲ್ಲಿ ಕುತೂಹಲ, ಗಹನ ಚರ್ಚೆ..!

ಸಚಿವ ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರಲ್ಲಿ ಭಾರೀ ಕುತೂಹಲ ಮೂಡಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಈ ಬಗ್ಗೆ ಪರಸ್ಪರ ಗಹನವಾಗಿ ಚರ್ಚಿಸಿದರು. ಈ ವದಂತಿಯನ್ನೇ ಅಸ್ತ್ರವಾಗಿಸಿಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ರಣತಂತ್ರ ರೂಪಿಸಿದ್ದರು. 

ಸದನದಲ್ಲಿ ಸುನಿಲ್ ಕುಮಾರ್ ಪ್ರಶ್ನೆ

ಕಲಾಪದ ವೇಳೆ ಬಿಜೆಪಿ ಶಾಸಕ ಸುನಿಲ್ ಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರದ ಕಾಲೆಳೆದರು. ‘ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಬರುತ್ತಿದೆ. ಮುಖ್ಯಮಂತ್ರಿಗಳ ಮಗನ ಹಸ್ತಕ್ಷೇಪ ಹೆಚ್ಚಾಗಿರುವುದರಿಂದ ಬೇಸತ್ತು ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಜಾರ್ಜ್ ಅವರು ಸದನಕ್ಕೆ ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ನಾನು ರಾಜೀನಾಮೆ ನೀಡಿಲ್ಲ - ಕೆ.ಜೆ. ಜಾರ್ಜ್ ಸ್ಪಷ್ಟನೆ:

ಸುನಿಲ್ ಕುಮಾರ್ ಅವರ ಪ್ರಶ್ನೆಗೆ ತಕ್ಷಣವೇ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್, ರಾಜೀನಾಮೆ ಸುದ್ದಿಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. ‘ನಾನು ಯಾವುದೇ ರಾಜೀನಾಮೆ ನೀಡಿಲ್ಲ ಮತ್ತು ರಾಜೀನಾಮೆ ನೀಡುವ ಪ್ರಶ್ನೆಯೇ ಬರೋದಿಲ್ಲ. ಅದೆಲ್ಲವೂ ಸತ್ಯಕ್ಕೆ ದೂರವಾದ ಮಾತು. ಬಹುಶಃ ಮಾಧ್ಯಮಗಳೇ ಇಂತಹ ಸುದ್ದಿಯನ್ನು ಸೃಷ್ಟಿ ಮಾಡಿರಬೇಕು ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, "ಮುಖ್ಯಮಂತ್ರಿಗಳ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನಾವು ನಂಬಿಕೆ ಮತ್ತು ವಿಶ್ವಾಸದಿಂದಲೇ ಸಿಎಂ ಜೊತೆಗಿದ್ದೇವೆ. ಹಸ್ತಕ್ಷೇಪದ ಮಾತುಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಮೌನವಾಗುವಂತೆ ಮಾಡಿದರು. ಈ ಸ್ಪಷ್ಟನೆಯೊಂದಿಗೆ ಸದ್ಯಕ್ಕೆ ಜಾರ್ಜ್ ರಾಜೀನಾಮೆ ವದಂತಿಗೆ ತೆರೆ ಬಿದ್ದಂತಾಗಿದ್ದು, ಬಿಜೆಪಿ ನಾಯಕರ ಕುತೂಹಲ ತಣ್ಣಗಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KJ George KJ George resignation
Advertisment