/newsfirstlive-kannada/media/media_files/2025/10/25/krishna-byregowda-2025-10-25-18-01-56.jpg)
ಕ್ಯಾಬಿನೆಟ್ ಪುನರ್ ರಚನೆಯ ಸುಳಿವು ಕೊಟ್ಟ ಕೃಷ್ಣ ಭೈರೇಗೌಡ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆಯ ಚರ್ಚೆಯಾಗುತ್ತಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ. ಸರ್ಕಾರ ರಚನೆಯ ಸಂದರ್ಭದಲ್ಲೇ ಬೇರೆಯವರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿತ್ತು . ಸಚಿವ ಸ್ಥಾನ ಸ್ವೀಕರಿಸುವುದಕ್ಕೂ ಮೊದಲೇ ಗಮನಕ್ಕೆ ತಂದು ಸಂಪುಟ ರಚಿಸಲಾಗಿತ್ತು . ಈ ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು . ಕ್ಯಾಬಿನೆಟ್ ನಿಂದ ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕು ಎಂಬ ನಿರ್ಧಾರ ಆಗಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕ್ಯಾಬಿನೆಟ್ ಪುನರ್ ರಚನೆಯಾಗಲಿದೆ ಎಂಬ ವಾದ, ಚರ್ಚೆಯನ್ನು ಸಚಿವ ಕೃಷ್ಣ ಭೈರೇಗೌಡರ ಈ ಹೇಳಿಕೆ ಪುಷ್ಟೀಕರೀಸಿದೆ.
ಸಂಪುಟಕ್ಕೆ ಅರ್ಹತೆ ಇರುವವರಿಗೆ ಅವಕಾಶ ಸಿಗಬೇಕು . ಆದರೆ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ . ಸಚಿವ ಸಂಪುಟ ಪುನರ್ ರಚನೆಗೂ ನಾಯಕತ್ವ ಬದಲಾವಣೆಗೂ ಸಂಬಂಧವಿಲ್ಲ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ಧವಾಗಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಅರ್ಹತೆಗೂ ಮೀರಿ ಅವಕಾಶ ಸಿಕ್ಕಿದೆ . ಪಕ್ಷ ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ . ಕ್ಷೇತ್ರ ಪುನರ್ ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ . ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದ್ರೆ ನಾನು ಸಚಿವ ಸ್ಥಾನ ಬಿಡಲು ರೆಡಿಯಾಗಿದ್ದೇನೆ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ . ಅವಕಾಶ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ಅಲ್ಲ . ಇನ್ನೂ ಮಾಡುವ ಕೆಲಸ ಬಾಕಿ ಇದೆ . ಅವಕಾಶದ ವಿಚಾರದಲ್ಲಿ ನಾನು ಸಂತೃಪ್ತನಾಗಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಬೆಂಗಳೂರಿನಲ್ಲಿ ಇಂದು ಹೇಳಿದ್ದಾರೆ.
/filters:format(webp)/newsfirstlive-kannada/media/media_files/2025/10/25/krishna-byregowda-02-2025-10-25-18-04-52.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us