/newsfirstlive-kannada/media/media_files/2025/08/18/gruhalaxmi-scheme-022-2025-08-18-18-40-07.jpg)
2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ರಾಜ್ಯ ವಿಧಾನಸಭೆಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದೇ ಇರುವ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಕಾವೇರಿದ ಚರ್ಚೆ ನಡೆದಿದೆ. ಕಳೆದ ವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿಧಾನಸಭೆಗೆ ಈ ಬಗ್ಗೆ ಲಿಖಿತ ಉತ್ತರ ನೀಡಿದ್ದಾರೆ. ಇದರಲ್ಲಿ 23 ಕಂತುಗಳ ಹಣವನ್ನು ನೇರವಾಗಿ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉತ್ತರ ನೀಡಿದ್ದರು.
ಆದರೇ, ಇನ್ನೂ ಎರಡು ತಿಂಗಳ ಹಣವನ್ನು ಫಲಾನುಭವಿ ಮಹಿಳೆಯರಿಗೆ ನೀಡುವುದು ಬಾಕಿ ಇದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸರಿಯಾದ ಮಾಹಿತಿಯನ್ನು ವಿಧಾನಸಭೆಗೆ ನೀಡಿಲ್ಲ. ಹೀಗಾಗಿ ಇದರ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
ಇಂದು ಗೃಹಲಕ್ಷ್ಮಿ ಹಣ ಬಿಡುಗಡೆಯಾಗದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾಯಿತು. ಸರ್ಕಾರದ ಬಳಿ ಹಣ ಇಲ್ಲ. ಸರ್ಕಾರ ದಿವಾಳಿ ಆಗಿದೆ ಎಂದು ಹೇಳಿಬಿಡಿ, ಒಪ್ಪಿಕೊಳ್ಳುತ್ತೇವೆ ಎಂದು ಬಿಜೆಪಿ ಸದಸ್ಯ ಕಾರ್ಕಳ ಸುನೀಲ್ ಕುಮಾರ್ ಹೇಳಿದ್ದರು.
ಇದಕ್ಕೆ ಮಧ್ಯಪ್ರವೇಶಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೀಡುವುದಾಗಿ ಬಜೆಟ್ ನಲ್ಲೇ ಘೋಷಿಸಿತ್ತು. ಕೊಡಲಿಲ್ಲ. ಜಲ ಜೀವನ್ ಮಿಷನ್ ಯೋಜನೆಯ ಹಣವನ್ನು ಕೊಟ್ಟಿಲ್ಲ. ನರೇಗಾ ಯೋಜನೆಯ ಹಣವನ್ನು ಕೊಟ್ಟಿಲ್ಲ. ಹಾಗಾದರೇ, ಕೇಂದ್ರ ಸರ್ಕಾರವನ್ನು ನಾವು ದಿವಾಳಿಯಾಗಿದೆ ಎಂದು ಹೇಳಲಾಗುತ್ತಾ ಎಂದು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ್ದರು.
ಇನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉತ್ತರ ನೀಡಿದ್ದರು. ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಫಲಾನುಭವಿಗಳಿಗೆ ಇನ್ನೂ 2 ತಿಂಗಳ ಹಣ ನೀಡುವುದು ಬಾಕಿ ಇದೆ. 2 ತಿಂಗಳ ಹಣ ನೀಡಿಲ್ಲ ಎಂದು ವಿಧಾನಸಭೆಯಲ್ಲಿ ಒಪ್ಪಿಕೊಂಡರು. ನಾನು ವಿಪಕ್ಷ ನಾಯಕರಿಗೂ ಮನವಿ ಮಾಡುತ್ತೇನೆ. ಗೃಹಲಕ್ಷ್ಮಿ ಯೋಜನೆ ಹಣ ತಲುಪಿಸುವ ಕೆಲಸ ಮಾಡುತ್ತೇವೆ . ನನ್ನ ಮಾಹಿತಿ ಪ್ರಕಾರ ಕೊಟ್ಟಿದ್ದೇವೆ ಅಂತ ಇತ್ತು . ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದೇನೆ. ಸದನವನ್ನ ದಾರಿ ತಪ್ಪಿಸುವ ಕೆಲಸ ಮಾಡೋದಿಲ್ಲ. ಈ ಬಗ್ಗೆ ಆರ್ಥಿಕ ಇಲಾಖೆ ಜೊತೆ ಮಾತನ್ನಾಡುತ್ತೇನೆ. ಹಣ ಹೋಗದಿದ್ರೆ ಹಾಕಲು ಹೇಳುತ್ತೇನೆ. ಹಾಗಂತ ಹಣ ಬೇರೆ ಕಡೆ ಹೋಗಿದೆ ಅಂತ ಅಲ್ಲ . ವಿಚಾರಿಸಿದಾಗ ಇನ್ನೂ ಎರಡೂ ತಿಂಗಳು ಹಣ ಬಂದಿಲ್ಲ ಅಂತ ಮಾಹಿತಿ ಬಂದಿದೆ ಎಂದು ಸದನದಲ್ಲಿ ತಪ್ಪನ್ನು ಲಕ್ಷ್ಮಿ ಹೆಬ್ಬಾಳ್ಕರ್ ಒಪ್ಪಿಕೊಂಡಿದ್ದಾರೆ. ಈ ವೇಳೆ ಸಚಿವರ ಉತ್ತರಕ್ಕೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ನೂ ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದೇ ಇರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
/filters:format(webp)/newsfirstlive-kannada/media/post_attachments/wp-content/uploads/2023/07/Gruhalaxmi.jpg)
ಇನ್ನೂ ವಿಧಾನಸಭೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ಆಡಳಿತ- ಪ್ರತಿಪಕ್ಷ ಸದಸ್ಯರ ನಡುವೆ ಜೋರಾದ ಚರ್ಚೆ ನಡೆಯಿತು. ನಾನು ಮಹಿಳೆ ಅಂತ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದೀರಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಬಿಜೆಪಿ ಸದಸ್ಯರಿಗೆ ಹೇಳಿದ್ದರು. ನಾವು ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ ಪ್ರಶ್ನೆ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ತಪ್ಪು ಉತ್ತರ ಕೊಟ್ಟಿದ್ದರೂ ಪ್ರಶ್ನೆ ಮಾಡುತ್ತಿದ್ದೇವು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು.
/filters:format(webp)/newsfirstlive-kannada/media/post_attachments/wp-content/uploads/2023/07/Karnataka-Session.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us