ರಾಧಿಕಾ ಕುಮಾರಸ್ವಾಮಿ ವಿಚಾರಣೆ ಹಿಂದಿನ ಸಿಕ್ರೇಟ್ ಹೇಳಿದ ಜಮೀರ್​..!

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದರು. ರಾಧಿಕಾ ಕುಮಾರಸ್ವಾಮಿ ವಿಚಾರಣೆ ಬಗ್ಗೆ ಇದೀಗ ಜಮೀರ್ ಪ್ರತಿಕ್ರಿಯಿಸಿದ್ದಾರೆ.

author-image
Ganesh Kerekuli
RADHIKA
Advertisment

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ಮಾಡಿದ್ದರು. ರಾಧಿಕಾ ಕುಮಾರಸ್ವಾಮಿ ವಿಚಾರಣೆ ಬಗ್ಗೆ ಇದೀಗ ಜಮೀರ್ ಪ್ರತಿಕ್ರಿಯಿಸಿದ್ದಾರೆ. 

ರಾಧಿಕಾ ಕುಮಾರಸ್ವಾಮಿ ಅವರು ಮನೆ ತೆಗೆದುಕೊಳ್ಳುವಾಗ ಎರಡು ಕೋಟಿ ಸಾಲ ಪಡೆದಿದ್ದರು. ಆ ಬಗ್ಗೆ ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ಅವರು ಕೂಡ ಇನ್‌ ಕಮ್ ಟ್ಯಾಕ್ಸ್‌ನಲ್ಲಿ ತೋರಿಸಿದ್ದಾರೆ. ನನ್ನ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದರು.

ಇದನ್ನೂ ಓದಿ:ಸಚಿವ ಜಮೀರ್​ಗೆ 2 ಕೋಟಿ ಹಣ.. ಲೋಕಾಯುಕ್ತ ವಿಚಾರಣೆಯಲ್ಲಿ ನಟಿ ರಾಧಿಕಾ ಹೇಳಿದ್ದೇನು?

ನಂತರ ಅವರು ಪ್ರಕರಣವನ್ನು ಎಸಿಬಿಗೆ ಶಿಫಾರಸು ಮಾಡಿದ್ದರು. ಎಸಿಬಿ ರದ್ದಾದ ಬಳಿಕ ಲೋಕಾಯುಕ್ತ ಕೇಸ್ ಹ್ಯಾಂಡಲ್ ಮಾಡ್ತಿದೆ. ಹೀಗಾಗಿ ರಾಧಿಕಾ ಕುಮಾರಸ್ವಾಮಿ ಅವರ ಹೇಳಿಕೆ ಪಡೆಯಲು ಕರೆದಿದ್ದಾರೆ. ಅವರು ಹೇಳಿಕೆ ಕೊಟ್ಟಿದ್ದಾರೆ. ಇನ್​ ಕಮ್ ಟ್ಯಾಕ್ಸ್​ನಲ್ಲಿ ನಾನು ಲೆಕ್ಕ ತೋರಿಸಿದ್ದೇನೆ, ಅವರೂ ಕೂಡ ತೋರಿಸಿದ್ದಾರೆ ಎಂದು ಜಮೀರ್ ಹೇಳಿದ್ದಾರೆ. 

ಸೆಪ್ಟೆಂಬರ್ 1 ರಂದು ರಾಧಿಕಾ ಕುಮಾರಸ್ವಾಮಿ ತನಿಖೆ ಎದುರಿಸಿದ್ದರು. ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ್ದಾರೆ. 

ಇದನ್ನೂ ಓದಿ:ಅಧಿಕೃತವಾಗಿ ರಚನೆಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ; ಸೀತಾರಾಮನ್ ಸೇರಿ 75 ಸದಸ್ಯರು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment