CM ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಚಾಲೆಂಜ್ ಹಾಕಿದ ನಿಖಿಲ್ ಕುಮಾರಸ್ವಾಮಿ

ವೇದಿಕೆ ಮೇಲೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನೇರ ಚಾಲೆಂಜ್ ಹಾಕಿದರು. ಈ ವೇಳೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು, ಕಾರ್ಯಕರ್ತರು ಶಿಳ್ಳೆ, ಕೇಕೆ ಹಾಕಿ ಹರ್ಷ ವ್ಯಕ್ತಪಡಿಸಿದರು. 

author-image
Bhimappa
Advertisment

ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರೊಂದಿಗೆ ಜೆಡಿಎಸ್​ ಯಾತ್ರೆ ನಡೆಸಿದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನೇರ ಚಾಲೆಂಜ್ ಹಾಕಿದರು. ಈ ವೇಳೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನರು, ಕಾರ್ಯಕರ್ತರು ಶಿಳ್ಳೆ, ಕೇಕೆ ಹಾಕಿ ಹರ್ಷ ವ್ಯಕ್ತಪಡಿಸಿದರು. 

ಜೆಡಿಎಸ್​ 2 ಸ್ಥಾನಕ್ಕೆ ಕುಸಿಯುತ್ತೆ. ರಾಷ್ಟ್ರೀಯ ಪಕ್ಷದೊಂದಿಗೆ ವಿಲೀನ ಆಗುತ್ತೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅಪಹಾಸ್ಯ ಮಾಡಿದ್ದರು. ರಾಮನಗರದಲ್ಲಿ ನಿಂತು ಧಮ್ಮು, ತಾಕತ್, ಶಕ್ತಿ ಬಗ್ಗೆ ಮಾತನಾಡುತ್ತೀರಿ. ಈ ಪದಗಳನ್ನು ಸ್ವೀಕರಿಸುವ ಶಕ್ತಿ ನಿಮಗೆ ಇದ್ರೆ ಜೆಡಿಎಸ್​ನ ಕಾರ್ಯಕರ್ತನಾಗಿ ನಿಮಗೆ ಸವಾಲು ಹಾಕ್ತೇನೆ. ನೀವು ಒಂದು ಪ್ರಾದೇಶಿಕ ಪಕ್ಷ ಕಟ್ಟಿ ಒಂದು ಅಥವಾ ಎರಡು ಸೀಟು ಗೆದ್ದು ತೋರಿಸಿ. ಆ ಮೇಲೆ ಅದಕ್ಕೆ ಉತ್ತರ ಕೊಡುತ್ತೇವೆ ಎಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.    

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH DK Shivakumar Nikhil Kumaraswamy
Advertisment