ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ : ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಆರ್.ಎಸ್.ಎಸ್. ಚಟುವಟಿಕೆ ನಿರ್ಬಂಧ ಪ್ರಶ್ನಿಸಿ ಆರ್‌ಎಸ್ಎಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ಇಂದು ಹೈಕೋರ್ಟ್ ವಿಚಾರಣೆ ನಡೆಸಿತು. ಸಂವಿಧಾನ ನೀಡಿರುವ ಹಕ್ಕು ಅನ್ನು ಸರ್ಕಾರ ಕಿತ್ತುಕೊಳ್ಳಲಾಗದು ಎಂದು ಹೈಕೋರ್ಟ್ ಹೇಳಿದೆ. ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದೆ.

author-image
Chandramohan
HIGH COURT OF KARNATAKA

ಹೈಕೋರ್ಟ್ ನಿಂದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ

Advertisment
  • ಹೈಕೋರ್ಟ್ ನಿಂದ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ
  • ಆರ್‌ಎಸ್ಎಸ್ ಚಟುವಟಿಕೆ ನಿರ್ಬಂಧ ವಿಧಿಸಿದ್ದ ಆದೇಶಕ್ಕೆ ತಡೆಯಾಜ್ಞೆ
  • ಮಧ್ಯಂತರ ತಡೆಯಾಜ್ಞೆ ನೀಡಿ, ರಾಜ್ಯ ಸರ್ಕಾರಕ್ಕೆ ನೋಟೀಸ್ ನೀಡಿದ ಹೈಕೋರ್ಟ್

ಅಕ್ಟೋಬರ್ 18, 2025 ರಂದು ರಾಜ್ಯ ಸರ್ಕಾರವು ಆರ್‌.ಎಸ್.ಎಸ್. ಶಾಖೆಗಳ ಸಭೆ ಹಾಗೂ ಪಥ ಸಂಚಲನಕ್ಕೆ ಸಾರ್ವಜನಿಕ ಸ್ಥಳ ಬಳಕೆ ಮಾಡಬಾರದೆಂದು ಹೊರಡಿಸಿರುವ  ಆದೇಶ ಪ್ರಶ್ನಿಸಿ ಆರ್‌ಎಸ್‌ಎಸ್ , ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಜಸ್ಟೀಸ್ ನಾಗಪ್ರಸನ್ನ ಅವರ ಪೀಠವು  ರಾಜ್ಯ ಸರ್ಕಾರ, ರಾಜ್ಯ ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಪೊಲೀಸ್ ಕಮೀಷನರ್‌ಗೆ ನೋಟೀಸ್ ನೀಡಿದೆ. 

ಅನುಮತಿಯಿಲ್ಲದೇ 10 ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ.  ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ .  ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ .  ಸಂವಿಧಾನದ ಆರ್ಟಿಕಲ್ 19 (1)A, B,  ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ.  ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು  ಹೈಕೋರ್ಟ್ ಹೇಳಿದೆ. 

ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ  ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.  ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು  ಹೈಕೋರ್ಟ್ ನೀಡಿದೆ. ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ, ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಗೃಹ ಇಲಾಖೆ ಹಾಗೂ ಹುಬ್ಬಳ್ಳಿ ಪೊಲೀಸ್ ಕಮೀಷನರ್‌ಗೆ ನೋಟೀಸ್ ನೀಡಿದೆ.

HC JUSTICE NAGAPRASSANNA



ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

HIGH COURT STAYS GOVT. ORDER
Advertisment