/newsfirstlive-kannada/media/media_files/2025/10/09/narendra-swamy-and-eshwar-kandre-2025-10-09-12-53-19.jpg)
ನರೇಂದ್ರ ಸ್ವಾಮಿ ಮತ್ತು ಸಚಿವ ಈಶ್ವರ್ ಖಂಡ್ರೆ ನಡುವೆ ತಿಕ್ಕಾಟ
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋಸ್ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ನೀಡಿತ್ತು. ಬಳಿಕ ಜಿಲ್ಲಾಡಳಿತದ ಮೂಲಕ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಜಡಿಯಲಾಗಿತ್ತು. ಇದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆಯ ಕೈ ಕೆಳಗೆ ಕಾರ್ಯನಿರ್ವಹಿಸುತ್ತೆ. ಆದರೇ, ಮಾಲಿನ್ಯ ನಿಯಂತ್ರಣ ಮಂಡಳಿಗೆ ಇತ್ತೀಚೆಗೆ ಹೊಸದಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ, ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದ್ದಾರೆ. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆಗೆ ಜಾಲಿವುಡ್ ಸ್ಟುಡಿಯೋಸ್ ಬಂದ್ ಮಾಡಿಸುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಇದರಿಂದಾಗಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆಗೆ ಶಾಕ್ ಮತ್ತು ಅಚ್ಚರಿಯಾಗಿದೆ.
ಈ ವಿಷಯ ಈಗ ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ ತಲುಪಿದೆ. ಸಿಎಂ ಸಿದ್ದರಾಮಯ್ಯ, ಸಚಿವ ಈಶ್ವರ್ ಖಂಡ್ರೆ ಹಾಗೂ ನರೇಂದ್ರ ಸ್ವಾಮಿ ಇಬ್ಬರನ್ನೂ ಕರೆದು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ.
ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ, ಸಚಿವರಾಗಿದ್ದವರು. ಹೀಗಾಗಿ ಎಲ್ಲದ್ದಕ್ಕೂ ತಾವೇಕೆ ಸಚಿವ ಈಶ್ವರ್ ಖಂಡ್ರೆಯನ್ನ ಕೇಳಬೇಕು, ಸ್ವತಂತ್ರವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಮುನ್ನಡೆಸಿಕೊಂಡು ಹೋಗುವೆ ಎಂಬ ಧೋರಣೆ ಇರಬಹುದು. ಆದರೇ, ತಮ್ಮ ಇಲಾಖೆಯ ಮಂಡಳಿಯು ತಮಗೆ ಯಾವುದೇ ಮಾಹಿತಿ ನೀಡದೇ ಪ್ರಮುಖ ತೀರ್ಮಾನ ಕೈಗೊಳ್ಳುತ್ತಿದೆ ಎಂಬ ಅಸಮಾಧಾನ ಈಶ್ವರ್ ಖಂಡ್ರೆಯವರಲ್ಲಿದೆಯಂತೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.