/newsfirstlive-kannada/media/media_files/2025/08/01/prajwal-revanna-crying-2025-08-01-14-05-21.jpg)
ಪ್ರಜ್ವಲ್ ರೇವಣ್ಣ
ಅತ್ಯಾಚಾರ ಕೇಸ್ ನಲ್ಲಿ ಕೆಳ ನ್ಯಾಯಾಲಯದಿಂದ ಜೀವಾವಧಿ ಜೈಲುಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಪರ ವಕೀಲರು ವಾದಮಂಡನೆ ಮಾಡಿದ್ದರು.
ಪ್ರಜ್ವಲ್ ರೇವಣ್ಣ ಪರ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡನೆ ಮಾಡಿದ್ದರು. ಪ್ರಜ್ವಲ್ 2024 ರ ಏಪ್ರಿಲ್ ತಿಂಗಳಿನಲ್ಲಿ ವಿದೇಶಕ್ಕೆ ತೆರಳಿದಾಗ ಯಾವುದೇ ಕೇಸ್ ಇರಲಿಲ್ಲ.
ಆ್ಯಪಲ್ ಮೊಬೈಲ್ ವಶಕ್ಕೆ ನೀಡಿಲ್ಲವೆಂದು ಪ್ರಾಸಿಕ್ಯೂಷನ್ ಆರೋಪಿಸಿದೆ. ಆ್ಯಪಲ್ ಮೊಬೈಲ್ ನೀಡುವಂತೆ ಸೆಕ್ಷನ್ 91 ಅಡಿ ನೋಟಿಸ್ ನೀಡಿಲ್ಲ . ಐಎಂಇಐ ನಂಬರ್ ಆಧರಿಸಿ ಮೊಬೈಲ್ ಕಂಪನಿಯಿಂದ ಮಾಹಿತಿ ಪಡೆಯಲು ಯತ್ನಿಸಿಲ್ಲ . ಸಂತ್ರಸ್ತೆ ದೂರು ದಾಖಲಿಸದೇ 3 ವರ್ಷ ಮೌನವಾಗಿ ಇದ್ದಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ. ಒಮ್ಮೆಗೇ ನಾಲ್ಕು ಪ್ರತ್ಯೇಕ ಕ್ರಿಮಿನಲ್ ಕೇಸ್ ಗಳು ಹೇಗೆ ದಾಖಲಾದವು?
ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ಥೆಯನ್ನು ಇಲ್ಲಿನ ರಾಜ್ಯ ಸರ್ಕಾರ ಬಳಸಿ ಕೇಸ್ ದಾಖಲಿಸಿದೆ . 2019, 2021 ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023 ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಫಾರ್ಮ್ ಹೌಸ್ ಗೆ ಬಂದರೂ ಆಕೆಯ ಬಟ್ಟೆಗಳನ್ನು ಹಿಂಪಡೆಯಲಿಲ್ಲವೇಕೆ? ಪೊಲೀಸರು ಬಟ್ಟೆಯನ್ನು ವಶಕ್ಕೆ ಪಡೆದಿರುವುದೇ ಸಂಶಯಾಸ್ಪದವಾಗಿದೆ. ಡಿಎನ್‌ಎ ಪರೀಕ್ಷೆ ಮಾಡಿದ ವ್ಯಕ್ತಿಯೇ ಮೃತಪಟ್ಟಿದ್ದಾರೆ . ಹೀಗಾಗಿ ಎಫ್‌ಎಸ್‌ಎಲ್ ಸಾಕ್ಷಿ ಒಪ್ಪತಕ್ಕದ್ದಲ್ಲವೆಂದು ಸಿದ್ದಾರ್ಥ್ ಲೂಥ್ರಾ ವಾದ ಮಂಡನೆ ಮಾಡಿದ್ದರು. ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
/filters:format(webp)/newsfirstlive-kannada/media/media_files/2025/09/16/high-court-of-karnataka-2025-09-16-15-16-25.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us