/newsfirstlive-kannada/media/media_files/2025/10/29/sc-internal-reservation-meeting02-2025-10-29-18-41-43.jpg)
SC ಒಳ ಮೀಸಲಾತಿ ಜಾರಿ ಸಮಸ್ಯೆ ಪರಿಹಾರಕ್ಕೆ ಸಭೆ
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಎಲ್ಲ 101 ಜಾತಿಗಳಿಗೂ ಶೇ.17 ರಷ್ಟು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿದೆ. ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆಯಾಗಿದೆ. ಆದರೇ ಒಳ ಮೀಸಲಾತಿಯ ಬಗ್ಗೆ ಕ್ಯಾಬಿನೆಟ್ ತೆಗೆದುಕೊಂಡ ತೀರ್ಮಾನವನ್ನು ಜಾರಿ ಮಾಡುವಾಗ ಕೆಲ ಸಮಸ್ಯೆಗಳು ಎದುರಾಗಿವೆ. ಹೀಗಾಗಿ ಈ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.
ಈಗಾಗಲೇ ಒಳ ಮೀಸಲಾತಿಯ ರೋಸ್ಟರ್ ಬಿಂದುವನ್ನು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಈಗ ಯಾವುದೇ ಜಾತಿಗಳಿಗೂ ಹಂಚಿಕೆಯಾಗಿರುವ ರೋಸ್ಟರ್ ನಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಬೇಕು. ಯಾವುದೇ ಜಾತಿಗಳಿಗೂ ರೋಸ್ಟರ್ ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
• ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.
• ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us