/newsfirstlive-kannada/media/media_files/2025/12/14/shamanur-shivashankarappa-2-2025-12-14-20-33-27.jpg)
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:BREAKING NEWS: ಶಾಮನೂರು ಶಿವಶಂಕರಪ್ಪ ಇನ್ನಿಲ್ಲ
ಸಿಎ ಸಿದ್ದರಾಮಯ್ಯ ಟ್ವೀಟ್ ಮಾಡಿ, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ.
— CM of Karnataka (@CMofKarnataka) December 14, 2025
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ… pic.twitter.com/952DZO6vMO
ಕಂಬನಿ ಮಿಡಿದ ಮಾಜಿ ಪ್ರಧಾನಿ
ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್ ಮಾಡಿ.. ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. ಅವರ ಸರಳತೆ ಮತ್ತು ಸಾರ್ವಜನಿಕ ಜೀವನದಲ್ಲಿ ಅವರ ಸುಧೀರ್ಘ ಜನಸೇವೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಭರಿಸಲಾಗದ ನಷ್ಟವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಆರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರಾಗಿ ಸೇವೆ.. ಶಾಮನೂರು ಬೆಳೆದು ಬಂದ ರಾಜಕೀಯ ಹಾದಿ
ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು.
— H D Devegowda (@H_D_Devegowda) December 14, 2025
1/2 pic.twitter.com/K3cKdFPAfA
ಯಡಿಯೂರಪ್ಪ ಅವರಿಂದ ಸಂತಾಪ
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ.. ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ. ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ. ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಕಂಬನಿ ಮಿಡಿದಿದ್ದಾರೆ.
ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ… pic.twitter.com/tAoDvc074G
— B.S.Yediyurappa (@BSYBJP) December 14, 2025
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/mjvsqqYkln
— DK Shivakumar (@DKShivakumar) December 14, 2025
ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ… pic.twitter.com/E51CLDf2AR
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2025
ಮಾಜಿ ಸಚಿವರು, ಹಿರಿಯ ಮುಖಂಡರು, ವೀರಶೈವ ಮಹಾಸಭೆಯ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ.
— R. Ashoka (@RAshokaBJP) December 14, 2025
ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶಾಮನೂರು ಶಿವಶಂಕರಪ್ಪನವರು ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು… pic.twitter.com/70FuQCkt1L
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು… pic.twitter.com/wNhwFSCFE9
— Vijayendra Yediyurappa (@BYVijayendra) December 14, 2025
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us