/newsfirstlive-kannada/media/media_files/2026/01/13/dcm-dk-shivakumar-met-rahul-gandhi-1-2026-01-13-18-18-02.jpg)
ಸಿಎಂ, ಡಿಸಿಎಂ ಇಬ್ಬರನ್ನೂ ದೆಹಲಿಯಲ್ಲಿ ಭೇಟಿಯಾಗುವ ಭರವಸೆ
ಮೈಸೂರಿನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಭೇಟಿಗೆ ಸಮಯಾವಕಾಶವನ್ನು ಸಿಎಂ ಸಿದ್ಧರಾಮಯ್ಯ ಕೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಭೇಟಿಗೆ ಸಮಯ ಅವಕಾಶವನ್ನು ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ.
ಸಂಪುಟ ಪುನಾರಚನೆ ವಿಚಾರವನ್ನ ಇಂದು ರಾಹುಲ್ ಗಾಂಧಿ ಮುಂದೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ಆಗ ಶೀಘ್ರವೇ ದೆಹಲಿಗೆ ಕರೆಯಿಸಿಕೊಳ್ಳುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಮನರೇಗಾ ಹೋರಾಟದಲ್ಲಿ ವಿಧಾನಸಭೆ ಅಧಿವೇಶನ ಮತ್ತು ಹೋರಾಟ ಕುರಿತು ವಿವರಣೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ವಿವರಣೆಯನ್ನು ಕೇಳಿಸಿಕೊಂಡು ರಾಹುಲ್ ಗಾಂಧಿ ದೆಹಲಿಗೆ ತೆರಳಿದ್ದಾರೆ.
ಇನ್ನೂ ಡಿಸಿಎಂ ಡಿಕೆಶಿ ಕೂಡ ದೆಹಲಿಗೆ ಬರಲು ರಾಹುಲ್ ಗಾಂಧಿ ಅವರ ಸಮಯಾವಕಾಶ ಕೇಳಿದ್ದಾರೆ.
ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರಲ್ಲಿ ಸಮಯಾಕಾಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಳಿದ್ದಾರೆ. ಡಿಸಿಎಂ ಮನವಿ ಹಿನ್ನೆಲೆಯಲ್ಲಿ ನೀವು ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಪ್ರಮುಖ ವಿದ್ಯಮಾನಗಳ ಕುರಿತು ಚರ್ಚಿಸಲು ಡಿಕೆಶಿ ನಿರ್ಧರಿಸಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಚರ್ಚಿಸಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಮಯ ನೀಡುವ ಮೂಲಕ ರಾಹುಲ್ ಗಾಂಧಿ ಗಮನ ಸೆಳೆದಿದ್ದಾರೆ.
/filters:format(webp)/newsfirstlive-kannada/media/media_files/2026/01/13/dcm-dk-shivakumar-met-rahul-gandhi-2026-01-13-17-51-27.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us