/newsfirstlive-kannada/media/media_files/2026/01/17/rasamalai-and-annamalai-2026-01-17-14-32-43.jpg)
ರಸಮಲೈ ಮತ್ತು ಅಣ್ಣಾಮಲೈ
ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ನಂತರ ರಸಮಲೈ ಎಂಬ ಸಿಹಿ ತಿನಿಸು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಟ್ರೆಂಡಿಂಗ್ ಆಗಿದೆ. ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ ಚುನಾವಣಾ ಪ್ರಚಾರಕ್ಕಾಗಿ ಮುಂಬೈಗೆ ಬಂದಾಗ, ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ರಸಮಲೈ ಎಂದು ವ್ಯಂಗ್ಯ ಮಾಡುವ ಮೂಲಕ ಸ್ವಾಗತಿಸಿದ್ದರು. ಆದ್ರೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ ಠಾಕ್ರೆ ಅವರ ಪಕ್ಷ ಮುಖಭಂಗ ಅನುಭವಿಸಿದೆ. ಇನ್ನು ಬಿಜೆಪಿ ನಾಯಕ ಅಣ್ಣಾಮಲೈ ಪ್ರಚಾರ ಮಾಡಿದ್ದ ಪ್ರದೇಶಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ.. ರಸಮಲೈ ಅನ್ನು ಟ್ವೀಟ್ ಮಾಡುವ ಮೂಲಕ ರಾಜ್​ ಠಾಕ್ರೆಗೆ ತಿರುಗೇಟು ನೀಡಿದೆ.
ಬೃಹನ್​​ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಎರಡು ದಶಕಗಳ ನಂತರ ಭಾರತದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯಾದ ಬೃಹನ್​ ಮುಂಬೈ ಮಹಾನಗರ ಮಾಲಿಕೆ ಠಾಕ್ರೆ ಕುಟುಂಬದ ತೆಕ್ಕೆಯಿಂದ ಕೈ ಜಾರಿದೆ.
ಮಹಾಯುತಿ ಮೈತ್ರಿಕೂಟದ ಯಶಸ್ಸಿನ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿಯ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ರಾಜ್ಯದ ಕ್ರಿಯಾಶೀಲ ಜನರು ಎನ್​ಡಿಎಯ ಜನಪರ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸುತ್ತಾರೆ. ವಿವಿಧ ಪುರಸಭೆಯ ಚುನಾವಣೆಗಳ ಫಲಿತಾಂಶವು ಮಹಾರಾಷ್ಟ್ರದ ಜನರೊಂದಿನ ಎನ್​ಡಿಎಯ ಬಾಂಧವ್ಯವು ವೃದ್ಧಸಿರುವುದನ್ನು ಸೂಚಿಸುತ್ತದೆ. ರಾಜ್ಯದ ಪ್ರಗತಿಗೆ ವೇಗ ನೀಡಲು ನಡೆದ ಮತದಾನ ಇದಾಗಿದೆ ಎಂದು ಮುಂಬೈ ಜನತೆಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
/filters:format(webp)/newsfirstlive-kannada/media/media_files/2026/01/16/bmc-election-results-2026-01-16-19-07-44.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us