/newsfirstlive-kannada/media/media_files/2026/01/21/rajeev-gowda-suspension-recommendation-2026-01-21-16-35-25.jpg)
ರಾಜೀವ್ ಗೌಡ ಸಸ್ಪೆಂಡ್‌ಗೆ ಶಿಸ್ತು ಸಮಿತಿಗೆ ಬರೆದ ಪತ್ರ
ಮಹಿಳಾ ಅಧಿಕಾರಿ ಮೇಲೆ ದರ್ಪ ತೋರಿದ ರಾಜೀವ್ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಪಕ್ಷ ಶಿಫಾರಸ್ಸು ಮಾಡಿದೆ. ರಾಜೀವ್ ಗೌಡನನ್ನ ಕಾಂಗ್ರೆಸ್ ನಿಂದ ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ.
ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಶಿಫಾರಸು ಮಾಡಿದ್ದಾರೆ. ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿ ನಿಂದಿಸಿರುವುದು ಸಾಬೀತಾಗಿರುವ ಕಾರಣ ಅಮಾನತುಗೆ ಶಿಫಾರಸು ಮಾಡಲಾಗಿದೆ. ಜೊತೆಗೆ ರಾಜೀವ್ ಗೌಡಗೆ ಕಾಂಗ್ರೆಸ್ ಪಕ್ಷದಿಂದ ನೋಟೀಸ್ ನೀಡಲಾಗಿತ್ತು. ಆದರೇ, ನೋಟೀಸ್ ಗೆ ಇದುವರೆಗೂ ಉತ್ತರ ನೀಡಿಲ್ಲ. ಹೀಗಾಗಿ ರಾಜೀವ್ ಗೌಡನನ್ನು ಪಕ್ಷದಿಂದ ಅಮಾನತು ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಆದರೇ, ಅಧಿಕೃತವಾಗಿ ಪಕ್ಷದ ಶಿಸ್ತು ಸಮಿತಿಯಿಂದ ಕಾಂಗ್ರೆಸ್ ಮುಖಂಡರನ್ನು ಅಮಾನತು ಮಾಡಬೇಕಾಗುತ್ತೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿಗೆ ರಾಜೀವ್ ಗೌಡನನ್ನು ಪಕ್ಷದಿಂದ ಸಸ್ಪೆಂಡ್ ಮಾಡುವಂತೆ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಶಿಫಾರಸ್ಸು ಮಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಜೀವ್ ಗೌಡ, ಇತ್ತೀಚೆಗೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರನ್ನು ಪೋನ್ ನಲ್ಲಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us