/newsfirstlive-kannada/media/media_files/2025/09/03/rv_deshpande-2025-09-03-09-22-17.jpg)
ಮಾಜಿ ಸಚಿವ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ
ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮದೇ ಕಾಂಗ್ರೆಸ್ ಪಕ್ಷದ ಸರ್ಕಾರದ ವಿರುದ್ಧವೇ ಆರ್.ವಿ.ದೇಶಪಾಂಡೆ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ . ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ . ಮುಖ್ಯಮಂತ್ರಿ ಇಂದಿರಾ ಕಿಟ್ ಕೊಡ್ತಾರೋ, ತೊಗರಿಬೇಳೆ ಎಂದು ತೆಂಗಿನಕಾಯಿ ಕೊಟ್ತಾರೋ, ನಮಗೇ ಏನು ಕೊಡ್ತಾರೆ ಎಂದು ತಿಳಿಯದು. ಮಹಿಳೆಯರು ಎಲ್ಲ ಸೌಲಭ್ಯಗಳನ್ನೂ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ . ಸರ್ಕಾರದ ಈ ಯೋಜನೆಗಳನ್ನು ಜನರಿಗೆ ತಲುಪಿಸಲು ರಚಿಸಿರುವ ಸಮಿತಿಗಳನ್ನು ನಿಭಾಯಿಸುವುದೇ ಆಗಿದೆ . ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಸ್ವಂತ ಸರ್ಕಾರದ ಗ್ಯಾರಂಟಿ ಸ್ಕೀಮ್ ಗಳ ವಿರುದ್ಧವೇ ಆರ್.ವಿ. ದೇಶಪಾಂಡೆ ಹರಿಹಾಯ್ದಿದ್ದಾರೆ. ತಮ್ಮ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ದಾಂಡೇಲಿಯ ಕಾರ್ಯಕ್ರಮದಲ್ಲಿ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.