/newsfirstlive-kannada/media/media_files/2025/12/14/shamanur-shivashankarappa-2-2025-12-14-20-33-27.jpg)
ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರೂ, ಮಾಜಿ ಸಚಿವ ಹಾಗೂ ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ (94) ಅವರ ಅಂತ್ಯಸಂಸ್ಕಾರ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಇಂದು ಸಂಜೆ ದಾವಣಗೆರೆಯ ಕಲ್ಲೇಶ್ವರ ಮಿಲ್ ನಲ್ಲಿ ನಡೆಯಿತು. ನೆಚ್ಚಿನ ನಾಯಕನನ್ನು ಬೀಳ್ಕೋಡಲು, ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಅಪಾರ ಜನಸ್ತೋಮ, ಬಂಧು, ಬಳಗ ಹಾಗೂ ರಾಜಕೀಯ ಗಣ್ಯರ ಪಡೆಯೇ ದೊಡ್ಡ ಸಂಖ್ಯೆಯಲ್ಲಿ ಹರಿದು ಬಂದಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಕ್ಯಾಬಿನೆಟ್ ಸಚಿವರುಗಳು, ಶಾಸಕರುಗಳು , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಲಿಂಗಾಯತ ಸ್ವಾಮೀಜಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಕ್ರಿಯಾ ಸಮಾಧಿಯಲ್ಲಿ ವಿಭೂತಿ ಹಾಕಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಪಂಚಪೀಠಾಧೀಶರ ಪಾದೋದ ಮೂಲಕ ಪೂಜೆ ನೆರವೇರಿಸಲಾಗಿದೆ. ಶಾಮನೂರು ಶಿವಶಂಕರಪ್ಪ ಅವರ ಪತ್ನಿ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ವೀರಶೈವ ಲಿಂಗಾಯತ ಪರಂಪರೆಯ ಪಂಚ ಪೀಠಗಳ ಪೀಠಾಧಿಪತಿಗಳು, ಸಾಣೆಹಳ್ಳಿ ಪೀಠದ ಸ್ವಾಮೀಜಿ, ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಮಹರ್ಷಿ ವಾಲ್ಮೀಕಿ ಪೀಠದ ಸ್ವಾಮೀಜಿ, ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಭಾಗಿಯಾಗಿದ್ದರು.
ಶಾಮನೂರು ಶಿವಶಂಕರಪ್ಪ ಅವರ ತಲೆಗೆ ಹಾಕಿದ್ದ ರುಮಾಲು ಅನ್ನು ಅವರ ಹಿರಿಯ ಮಗನ ತಲೆಗೆ ಸುತ್ತಲಾಯಿತು. ಬಳಿಕ ಕ್ರಿಯಾ ಪದ್ದತಿಯಂತೆ ವಿಭೂತಿ ಹಾಕಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ರಾಜ್ಯ ಸರ್ಕಾರದಿಂದ ಸಕಲ ಸರ್ಕಾರಿ ಗೌರವ ನೀಡಲಾಯಿತು. ಶಾಮನೂರು ಶಿವಶಂಕರಪ್ಪ ಪಾರ್ಥೀವ ಖರೀರಕ್ಕೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಾಮನೂರು ಪುತ್ರ ಎಸ್.ಎಸ್.ಮಲ್ಲಿಕಾರ್ಜುನಗೆ ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us